ಡಾ.ಬಿ.ಆರ್.ಅಂಬೇಡ್ಕರ್ ಅವರ 67ನೇ ಮಹಾ ಪರಿನಿಬ್ಬಾಣ ಕಾರ್ಯಕ್ರಮ

Ambedkar Statue
Published on

ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 67ನೇ ಮಹಾ ಪರಿನಿಬ್ಬಾಣ ಕಾರ್ಯಕ್ರಮದ ಅಂಗವಾಗಿ ಡಿ.6ರಂದು ಸಂಜೆ 6 ಗಂಟೆಗೆ ಅಶೋಕಪುರಂನಲ್ಲಿ ಮೇಣದಬತ್ತಿ ಮೆರವಣಿಗೆ ಹಮ್ಮಿಕೊಳ್ಳಲಾಗುತ್ತಿದೆ ಎಂದು ಲೇಖಕ ಸಿದ್ದಸ್ವಾಮಿ ತಿಳಿಸಿದರು.

ಅಂಬೇಡ್ಕರ್ ಅವರು ದೇಶದ ಬೆಳಕಾಗಿರುವ ಹಿನ್ನೆಲೆಯಲ್ಲಿ ಅವರನ್ನು ಸ್ಮರಿಸಲು ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಬಡಾವಣೆಯ ಡಾ.ಬಿ.ಆರ್.ಅಂಬೇಡ್ಕರ್ ಉದ್ಯಾನದಿಂದ ಹೊರಡುವ ಮೆರವಣಿಗೆ ಬಡಾವಣೆಯ ಮುಖ್ಯರಸ್ತೆಗಳಲ್ಲಿ ಸಾಗಲಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪಾಲಿಕೆ ಮಾಜಿ ಸದಸ್ಯೆ ಪಲ್ಲವಿಬೇಗಂ, ಮುಖಂಡರಾದ ಶಿವಣ್ಣ, ಬಬಿತಾ, ರಾಜು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net