ಪಿಡಿಒ ಅಬ್ದುಲ್ಲಾಗೆ ಡಾ.ಚಿಕ್ಕಕೊಮಾರಿಗೌಡ ದತ್ತಿ ಪ್ರಶಸ್ತಿ

ಚಿತ್ರ 7ಎಸ್ ಡಿ ಪಿ 07
ಪಿಡಿಒ ಅಬ್ದುಲ್ಲಾ
Published on

ಸಿದ್ದಾಪುರ: ಕರ್ನಾಟಕ ಪಂಚಾಯತ್‌ರಾಜ್ ಪರಿಷತ್‌ನಿಂದ ಕೊಡ ಮಾಡುವ ಡಾ.ಚಿಕ್ಕ ಕೊಮಾರಿಗೌಡ ದತ್ತಿ ಪ್ರಶಸ್ತಿಗೆ ಹೊದ್ದೂರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಬ್ದುಲ್ಲಾ ಆಯ್ಕೆಯಾಗಿದ್ದಾರೆ.

2021-22ನೇ ಸಾಲಿನ ಪ್ರಶಸ್ತಿ ಇದಾಗಿದ್ದು, ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವವರಿಗೆ ನೀಡುವ ಪ್ರಶಸ್ತಿ ಇದಾಗಿದೆ. ಡಿ.9ರಂದು ಬೆಂಗಳೂರಿನ ಗಾಂಧಿ ಭವನ ಆವರಣದಲ್ಲಿರುವ ಬಾಪು ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಪರಿಷತ್ ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net