ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಸೇವೆ ಅಭಿನಂದನೀಯ: ರಕ್ಷಿತ್ ಶಿವರಾಮ್ ಬಣ್ಣನೆ

Bel_Heggade's service
Published on

ಬೆಳ್ತಂಗಡಿ: ಗ್ರಾಮೀಣ ಭಾಗದಲ್ಲಿ ಅತ್ಯಾಧುನಿಕ ವ್ಯವಸ್ಥೆ ಹೊಂದಿರುವ ಹೈಟೆಕ್ ಆಸ್ಪತ್ರೆಯನ್ನು ತೆರೆದು ವೈದ್ಯಕೀಯ ಸೇವೆ ನೀಡುತ್ತಿರುವ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಕಾರ್ಯ ಅಭಿನಂದನೀಯ ಎಂದು ಬೆಂಗಳೂರಿನ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್ ಹೇಳಿರು.

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ಉಚಿತ ಡಯಾಲಿಸಿಸ್ ಸೆಂಟರ್‌ಗೆ ಭೇಟಿ ನೀಡಿ, ರೋಗಿಗಳ ಯೋಗಕ್ಷೇಮ ವಿಚಾರಿಸಿ ಮಾತನಾಡಿದರು.

ವ್ಯವಸ್ಥಾಪಕ ನಿರ್ದೇಶಕ ಎಂ.ಜನಾರ್ದನ್, ನರ್ಸಿಂಗ್ ಅಧೀಕ್ಷಕಿ ಶೆರ್ಲಿ, ಪಿ.ಸಿ.ಸಿ ಹೇಮಾವತಿ ಐ, ಸಂಪರ್ಕಾಧಿಕಾರಿ ಚಿದಾನಂದ ಡಿ. ಆರ್, ಸೂಪರ್‌ವೈಸರ್ ರವೀಂದ್ರ ಗುಡಿಗಾರ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net