ದಕ್ಷಿಣ ಶಿಕ್ಷಕರ ಕ್ಷೇತ್ರ ಬಿಜೆಪಿ ಅಭ್ಯರ್ಥಿಯಾಗಿ ಡಾ.ಈ.ಸಿ.ನಿಂಗರಾಜ್ ಗೌಡ ನಾಮಪತ್ರ ಸಲ್ಲಿಕೆ

14
Published on

ಮೈಸೂರು: ಜೆಡಿಎಸ್ ವತಿಯಿಂದ ವಿವೇಕಾನಂದಗೆ ಬಿ ಫಾರಂ ಕೊಟ್ಟಿರುವ ನಡುವೆಯೇ ದಕ್ಷಿಣ ಶಿಕ್ಷಕರ ಕ್ಷೇತ್ರ ಬಿಜೆಪಿ ಅಭ್ಯರ್ಥಿಯಾಗಿ ಡಾ.ಈ.ಸಿ.ನಿಂಗರಾಜ್ ಗೌಡ ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ.

ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಗೆ ಬೆಂಬಲಿಗರ ಜತೆ ಆಗಮಿಸಿದ ನಿಂಗರಾಜ್ ಗೌಡ ದಕ್ಷಿಣ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.

ಈ ನಡುವೆ ಜೆಡಿಎಸ್ ವತಿಯಿಂದ ವಿವೇಕಾನಂದಗೆ ಬಿ ಫಾರಂ ಕೊಡಲಾಗಿದೆ. ವಿವೇಕಾನಂದ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಎಂದು ಜೆಡಿಎಸ್ ಮುಖಂಡರು ಹೇಳಿದ್ದಾರೆ. ಈ ಮಧ್ಯೆ ನಿಂಗರಾಜ್ ಗೌಡ ನಾಮಪತ್ರ ಸಲ್ಲಿಸಿರುವುದು ಕುತೂಹಲ ಮೂಡಿಸಿದೆ.

ಲೋಕಸಭೆ ಚುನಾವಣೆಯಲ್ಲಿ ಮಾದರಿಯಲ್ಲೇ ವಿಧಾನ ಪರಿಷತ್ ಚುನಾವಣೆಯಲ್ಲೂ ಮೈತ್ರಿ ಮುಂದುವರಿಯಲಿದೆ, ಸೀಟುಗಳ ಹಂಚಿಕೆಮಾಡಿಕೊಳ್ಳಲಾಗುತ್ತದೆ ಎಂದು ಎರಡೂ ಪಕ್ಷಗಳ ಮುಖಂಡರು ಹೇಳಿದ್ದರು. ಅದರಂತೆ, ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಡಲಾಗಿದೆ. ಬಿಜೆಪಿಯಿಂದ ನನಗೆ ಟಿಕೆಟ್ ನೀಡಲಾಗಿದೆ. ನಾನು ಯಾವುದೇ ಕಾರಣಕ್ಕೂ ಹಿಂದೆ ಸರಿಯುವುದಿಲ್ಲ. ನಾನೇ ಎನ್‌ಡಿಎ ಅಭ್ಯರ್ಥಿಯಾಗಿದ್ದೇನೆ ಎಂದು ಡಾ.ಈ.ಸಿ.ನಿಂಗರಾಜ್ ಗೌಡ ಹಠಕ್ಕೆ ಬಿದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net