ಸಂಶೋಧನ ಕ್ಷೇತ್ರಕ್ಕೆ ಡಾ. ಹಳಕಟ್ಟಿ ಕೊಡುಗೆ ಅನನ್ಯ

Dr. for the field of research. Halakatti's contribution is unique
ವಿಜಯಪುರದ ಬಿಎಲ್​ಡಿಇ ಸಂಸ್ಥೆಯ ಡಾ. ಫ.ಗು. ಹಳಕಟ್ಟಿ ಸಂಶೋಧನ ಕೇಂದ್ರಕ್ಕೆ ಹಂಪಿ ವಿಶ್ವವಿದ್ಯಾಲಯದ ಕುಲಪತಿ ಡಾ. ಡಿ.ವಿ. ಪರಶಿವಮೂರ್ತಿ ಭೇಟಿ ನೀಡಿದರು. ಡಾ. ಎಂ.ಎಸ್​. ಮದಭಾವಿ, ಡಾ. ಅಮರೇಶ ಯತಗಲ್​, ಡಾ. ಕೃಷ್ಣ ಕೊಲ್ಹಾರ ಕುಲಕರ್ಣಿ ಮತ್ತಿತರರಿದ್ದಾರೆ.
Published on

ವಿಜಯಪುರ: ಡಾ. ಫ.ಗು. ಹಳಕಟ್ಟಿ ಸಂಶೋಧನ ಕೇಂದ್ರವು ಎಲ್ಲ ಸೌಲಭ್ಯಗಳನ್ನು ಹೊಂದಿದ್ದು, ಸಂಶೋಧನ ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ ನೀಡುವ ಮೂಲಕ ಇದೊಂದು ಮಾದರಿ ಸಂಸ್ಥೆಯಾಗಿ ಬೆಳೆದು ಬಂದಿದೆ. ಅಲ್ಲದೆ, ನಮ್ಮ ನಾಡಿನ ಹೆಮ್ಮೆಯಾಗಿದೆ ಎಂದು ಹಂಪಿ ವಿಶ್ವವಿದ್ಯಾಲಯದ ಕುಲಪತಿ ಡಾ. ಡಿ.ವಿ. ಪರಶಿವಮೂರ್ತಿ ಹೇಳಿದರು.

ನಗರದ ಬಿಎಲ್​ಡಿಇ ಸಂಸ್ಥೆಯ ಡಾ. ಫ.ಗು. ಹಳಕಟ್ಟಿ ಸಂಶೋಧನ ಕೇಂದ್ರಕ್ಕೆ ಇತ್ತೀಚೆಗೆ ಭೇಟಿ ನೀಡಿ ಮಾತನಾಡಿದ ಅವರು, ಡಾ. ಹಳಕಟ್ಟಿಯವರು ಒಬ್ಬ ವ್ಯಕ್ತಿ ಅಲ್ಲ. ಅವರೊಂದು ಸಂಸ್ಥೆ. ಅವರ ಹೆಸರಿನಲ್ಲಿ ಸಂಶೋಧನ ಕೇಂದ್ರ ಸ್ಥಾಪಿಸಿ ಗ್ರಂಥಗಳನ್ನು ಪ್ರಕಟಿಸಿ ಸಾಹಿತ್ಯ, ಸಂಶೋಧನ ೇತ್ರಕ್ಕೆ ಅವರು ನೀಡಿದ ಕೊಡುಗೆ ಅಪಾರ. ವಿಶ್ವವಿದ್ಯಾಲಯ ಮಾಡುವ ಸಾಹಿತ್ಯದ ಕೆಲಸವನ್ನು ಹಳಕಟ್ಟಿ ಸಂಶೋಧನ ಕೇಂದ್ರ ಮಾಡಿದೆ ಎಂದರು.

ಡಾ. ಹಳಕಟ್ಟಿ ಕೇಂದ್ರದ ಕಾರ್ಯದರ್ಶಿ ಡಾ. ಎಂ.ಎಸ್​. ಮದಭಾವಿ ಮಾತನಾಡಿ, ಎರಡು ದಶಕಗಳವರೆಗೆ ನಿರಂತರ ತನ್ನ ಗುಣಮಟ್ಟ ಕಾಯ್ದುಕೊಳ್ಳುವುದರ ಜತೆಗೆ ವಿವಿಧ ಪ್ರಕಾರದ ಸಾಹಿತ್ಯ ಗ್ರಂಥಗಳನ್ನು ಮುದ್ರಣಗೊಳಿಸಿದ ಸಂಸ್ಥೆಯು ಹಲವು ೇತ್ರಕ್ಕೆ ದೊಡ್ಡ ಕೊಡುಗೆ ನೀಡಿದೆ ಎಂದರು.

ಕನ್ನಡ ವಿಶ್ವವಿದ್ಯಾಲಯ ಅಧ್ಯಯನ ವಿಭಾಗದ ನಿರ್ದೇಶಕ ಡಾ. ಅಮರೇಶ ಯತಗಲ್​, ಹಸ್ತಪ್ರತಿಶಾಸ ವಿಭಾಗದ ಪ್ರಾಧ್ಯಾಪಕ ಡಾ. ವೀರೇಶ ಬಡಿಗೇರ, ಸಾಹಿತ್ಯ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ. ಶಿವಾನಂದ ವಿರಕ್ತಮಠ, ಶೈಕ್ಷಣಿಕ ವಿಭಾಗದ ನಿರ್ದೇಶಕ ಡಾ. ಸೋಮಶೇಖರ, ಕುಲಪತಿಗಳ ಆಪ್ತ ಕಾರ್ಯದರ್ಶಿ ಕೃಪಾಶಂಕರ, ಸಂಶೋಧನ ಕೇಂದ್ರದ ನಿರ್ದೇಶಕರಾದ ಡಾ. ಕೃಷ್ಣ ಕೊಲ್ಹಾರ ಕುಲಕರ್ಣಿ, ಮಾರ್ಗದರ್ಶಕ ಡಾ. ಎಂ.ಎಸ್​. ಮಾಗಣಗೇರಿ, ಡಾ. ಎಂ.ಎಸ್​. ಮೇತ್ರಿ ಸಂಶೋಧನಾರ್ಥಿ ಸುಭಾಸಚಂದ್ರ ಕನ್ನೂರ, ವನಜಾಕ್ಷಿ ಬಡಿಗೇರ, ದೀಪಾ ಲಗಳಿ, ಸುಷ್ಮಾ ಕುಂಬಾರ, ಮಹೇಶ ದೊಡ್ಡಿ ಮತ್ತಿತರರಿದ್ದರು. ಸಂಶೋಧನ ಕೇಂದ್ರದ ಸಂಯೋಜನಾಧಿಕಾರಿ ಡಾ. ವಿ.ಡಿ. ಐಹೊಳ್ಳಿ ಸ್ವಾಗತಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net