ಕೇಂದ್ರಿಯ ವಿಶ್ವವಿದ್ಯಾಲಯ ಅಕಾಡೆಮಿಕ್ ಕೌನ್ಸಿಲ್ ಗೆ ಡಾ. ಪಾಟೀಲ ನೇಮಕ

IMG-20250720-WA0011-1.jpg
Published on

ಹುಬ್ಬಳ್ಳಿ: ಇಲ್ಲಿಯ ನವನಗರ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ನಿವೃತ್ತ ಪ್ರಾಧ್ಯಾಪಕ ಡಾ. ಜಿ.ಬಿ. ಪಾಟೀಲ ಅವರು ಕಲಬುರ್ಗಿಯ ಕೇಂದ್ರಿಯ ವಿಶ್ವವಿದ್ಯಾಲಯದ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ ನೇಮಕವಾಗಿದ್ದಾರೆ.

ಇವರನ್ನು 3 ವರ್ಷದ ಅವಧಿಗೆ ನೇಮಕ ಮಾಡಲಾಗಿದೆ ಎಂದು ವಿವಿಯ ಕುಲಸಚಿವರ ಪ್ರಕಟಣೆ ತಿಳಿಸಿದೆ.

ಪಾಟೀಲ್ ಅವರು ಕೆಎಲ್ಇ ಸಂಸ್ಥೆಯ ಜಿ.ಕೆ. ಕಾನೂನು ಮಹಾವಿದ್ಯಾಲಯದ ಪ್ರಾಚಾರ್ಯರಾಗಿ, ಕಾನೂನು ವಿಶ್ವವಿದ್ಯಾಲಯ ಮೌಲ್ಯಮಾಪನ ಕುಲಸಚಿವರಾಗಿ, ಡೀನ್ ರಾಗಿ, ಕುಲಸಚಿವರಾಗಿ, ಹಣಕಾಸು ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net