

ಬೈಂದೂರು: ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು ಹಾಗೂ ಬಿಜಾಪುರ ಜಿಲ್ಲಾ ಘಟಕ ವತಿಯಿಂದ ಮುದ್ದೇಬಿಹಾಳ ಎಬಿಸಿ ಹೈಸ್ಕೂಲ್ ಮೈದಾನದಲ್ಲಿ ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಘಟಕ ಅಧ್ಯಕ್ಷ ಡಾ.ಗಣೇಶ್ ಗಂಗೊಳ್ಳಿ ಅವರಿಗೆ ಸ್ವಾಮಿ ವಿವೇಕಾನಂದ ಸದ್ಭಾವನಾ ರಾಜ್ಯ ಪ್ರಶಸ್ತಿಯನ್ನು ಶಾಸಕ ಸಿ.ಎಸ್.ನಾಡಗೌಡ ಪ್ರದಾನ ಮಾಡಿದರು.
ಸಿದ್ಧನಕೊಳ ನಿರಂತರ ದಾಸೋಹ ಮಠದ ಡಾ.ಶಿವಕುಮಾರ ಮಹಾಸ್ವಾಮಿ, ಜ್ಯೋತಿಷ್ಯರತ್ನ ಮಠದ ರಾಮಲಿಂಗಯ್ಯ ಸ್ವಾಮೀಜಿ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗಣ್ಣೂರು, ಬಾಗಲಕೋಟೆ ಜಿಲ್ಲಾ ಉಪಕಾರ್ಯದರ್ಶಿ ಪುನೀತ್, ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗುರುರಾಜ ಹೊಸಕೋಟೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಎಸ್.ಜಿ.ಲೋಣಿ, ರಾಜ್ಯ ಯುವ ಸಂಘಗಳ ಒಕ್ಕೂಟ ಅಧ್ಯಕ್ಷ ಡಾ.ಎಸ್.ಬಾಲಾಜಿ, ಕಜಾಪ ಬೆಳಗಾವಿ ಜಿಲ್ಲಾಧ್ಯಕ್ಷ ಸಿದ್ದಣ್ಣ ದುರ್ಡುಂಡಿ, ಕಜಾಪ ವಿಜಯಪುರ ಜಿಲ್ಲಾಧ್ಯಕ್ಷ ಪುಂಡಲೀಕ ಮುರಾಳ, ಮಲ್ಲಿಕಾರ್ಜುನ ಮದಲಿ par ಉಪಸ್ಥಿತರಿದ್ದರು.