ಮುಡಾ ಮಾಹಿತಿ ಪಡೆದ ಡಾ.ಎಚ್.ಸಿ.ಮಹದೇವಪ್ಪ

Published on

ಮೈಸೂರು: ರಾಜ್ಯದಲ್ಲಿ ಸದ್ದು ಮಾಡಿ ಪ್ರತಿಪಕ್ಷಗಳ ಟೀಕೆಗೆ ಗುರಿಯಾಗಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಭಾನುವಾರ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ಹೆಸರು ತಳಕು ಹಾಕಿಕೊಂಡಿರುವ ಕುರಿತು ವಿವರ ಪಡೆದ ಸಚಿವರು, ಕಾನೂನಿನ ಸಾಧಕ-ಬಾಧಕ, ನಿಯಮ ಪಾಲನೆಯಲ್ಲಿ ಲೋಪ ಅಗಿದೆಯೇ ಎನ್ನುವ ಮಾಹಿತಿ ಸಂಗ್ರಹಿಸಿದರು. ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ, ಜಿಲ್ಲಾ ಪಂಚಾಯತಿ ಸಿಇಒ ಕೆ.ಎಂ.ಗಾಯತ್ರಿ, ಮುಡಾ ಆಯುಕ್ತ ರಘುನಂದನ್, ನಗರ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್, ಡಿಎಚ್‌ಒ ಡಾ.ಪಿ.ಸಿ. ಕುಮಾರಸ್ವಾಮಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net