ಅಧಿಕಾರ ಸ್ವೀಕಾರ

web (1)
Published on

ಧಾರವಾಡ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ (ಆರ್‌ಸಿಎಚ್‌ಒ) ಅಧಿಕಾರಿಯಾಗಿ ಡಾ. ಸುಜಾತಾ ಹಸವಿಮಠ ಅವರನ್ನು ನೇಮಿಸಿ ಸರ್ಕಾರ ಆದೇಶಿಸಿದೆ. ಇತ್ತೀಚೆಗೆ ಬೆಂಗಳೂರು ಕೇಂದ್ರ ಕಚೇರಿಗೆ ವರ್ಗಾವಣೆಗೊಂಡಿದ್ದ ಡಾ. ಸುಜಾತಾ ಹಸವಿಮಠ ಸೋಮವಾರ ಆರ್‌ಸಿಎಚ್‌ಒ ಹುದ್ದೆಯ ಕಾರ್ಯಬಾರ ವಹಿಸಿಕೊಂಡರು. ಜಿಲ್ಲಾ ಆರೋಗ್ಯಾಧಿಕಾರಿ ಡಾ. ಶಶಿ ಪಾಟೀಲ ಹೂಗುಚ್ಚ ನೀಡಿ ಅಭಿನಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net