ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್‌ನಿಂದ ಡಾ.ಹೆಗ್ಗಡೆ ಅಭಿನಂದನೆ

photographer
Published on

ಧರ್ಮಸ್ಥಳ: ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನಗೊಂಡ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರನ್ನು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ದಕ್ಷಿಣ ಕನ್ನಡ - ಉಡುಪಿ ಜಿಲ್ಲೆ ಅಧ್ಯಕ್ಷ ಆನಂದ್ ಎನ್. ಬಂಟ್ವಾಳ ನೇತೃತ್ವದಲ್ಲಿ ಅಭಿನಂದಿಸಲಾಯಿತು. ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯ 14 ವಲಯದ ಪದಾಧಿಕಾರಿಗಳೊಂದಿಗೆ ಹೆಗ್ಗಡೆಯವರನ್ನು ಭೇಟಿಯಾಗಿ ಶುಭಹಾರೈಸಲಾಯಿತು. ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಸಲಹಾ ಸಮಿತಿ ಸದಸ್ಯರು, ವಲಯಾಧ್ಯಕ್ಷರು, ವಲಯ ಕಾರ್ಯದರ್ಶಿಗಳು, ವಲಯದ ಪದಾಧಿಕಾರಿಗಳು, ಸಂಘಟನೆ ಸದಸ್ಯರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net