ಉಜಿರೆ ಎಸ್‌ಡಿಎಂ ಶಾಲೆಯಲ್ಲಿ ಡಾ.ಹೆಗ್ಗಡೆಯವರ ಹುಟ್ಟುಹಬ್ಬ ಸಂಭ್ರಮ

New Project (11)
Published on

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ

ಧರ್ಮಸ್ಥಳ ಎಂದರೆ ಧರ್ಮ, ನ್ಯಾಯ, ಸತ್ಯ ಮತ್ತು ದಾನ. ಈ ಸಂಸ್ಥೆಯಲ್ಲಿ ವಿದ್ಯೆಯನ್ನು ಪಡೆಯುತ್ತಿರುವ ನೀವು ನಾವೆಲ್ಲರೂ ಧನ್ಯರು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿವೃತ್ತ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್.ಎಚ್ ಮಂಜುನಾಥ್ ಹೇಳಿದರು.

ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ(ಸಿ.ಬಿ.ಎಸ್.ಇ) ಡಾ.ಡಿ ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಸಂಭ್ರಮದ ಆಚರಣೆಯಲ್ಲಿ 8ನೇ ತರಗತಿಯ ವಿದ್ಯಾರ್ಥಿಗಳು ರಚಿಸಿದ ಸುವಿಚಾರ ಪುಸ್ತಕವನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ಕಿಂಡರ್ಗಾರ್ಟನ್ ವಿದ್ಯಾರ್ಥಿಗಳಿಂದ ಭಾಷಣ, 7ನೇ ತರಗತಿಯ ವಿದ್ಯಾರ್ಥಿನಿಯರಿಂದ ಶಿಕ್ಷಕಿ ಸುಮಾ ಶ್ರೀನಾಥ್ ಅವರು ರಚಿಸಿರುವ ಪದ್ಯದ ಗುಂಪು ಗಾಯನ, ವಿದ್ಯಾರ್ಥಿ ಸಮರ್ಥ್ ಕೊಳಲು ವಾದನ, 9ನೇ ತರಗತಿಯ ವಿದ್ಯಾರ್ಥಿಗಳಿಂದ ಪಂಚ ದಾನಗಳಾದ ವಿದ್ಯಾದಾನ, ಅನ್ನದಾನ, ವಸ್ತ್ರದಾನ, ಔಷಧದಾನ ಹಾಗೂ ವಸತಿ ದಾನಗಳ ಮೈಮ್ ಶೋ ಪ್ರಸ್ತುತಿ, 9 ಹಾಗೂ 10ನೇ ತರಗತಿಯ ವಿದ್ಯಾರ್ಥಿಗಳಿಂದ ಸಮೂಹ ನೃತ್ಯ, 7ನೇ ಹಾಗೂ 10ನೇ ತರಗತಿ ವಿದ್ಯಾರ್ಥಿನಿಯರಾದ ಚರಿತ ಹಾಗೂ ಚಂಪಾ ಡಾ. ಹೆಗ್ಗಡೆಯವರ ವ್ಯಕ್ತಿತ್ವ ಹಾಗೂ ದಾನಗಳ ಕುರಿತು ಭಾಷಣ ಮಾಡಿದರು. 5ನೇ ತರಗತಿ ವಿದ್ಯಾರ್ಥಿನಿ ಧೃತಿ, ಡಾ.ಹೆಗ್ಗಡೆಯವರ ವೇಷಧರಿಸಿ ಗಮನ ಸೆಳೆದರು.

ಡಾ.ಹೆಗ್ಗಡೆಯವರ ಜನ್ಮದಿನದ ಅಂಗವಾಗಿ ಶಾಲೆಯಲ್ಲಿ ಸಪ್ತಾಹ ಕಾರ್ಯಕ್ರಮ ವಿದ್ಯಾರ್ಥಿಗಳಿಗೆ ದಿನಕ್ಕೊಂದು ಸ್ಪರ್ಧೆಗಳನ್ನು ಆಯೋಜಿಸುವ ಮೂಲಕ ಆಚರಿಸಲಾಗಿತ್ತು. ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಮುಖ್ಯಶಿಕ್ಷಕ ಮನ್ಮೋಹನ್ ನಾಯ್ಕ ಕೆ.ಜಿ.ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿನಿ ಹರ್ಷಿಣಿ ನಿರೂಪಿಸಿ ಶಾಲಾ ಮುಖ್ಯಶಿಕ್ಷಕ ಮನ್ಮೋಹನ್ ನಾಯ್ಕ ಕೆ.ಜಿ.ಸ್ವಾಗತಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net