ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಪಠ್ಯೇತರ ಚಟುವಟಿಕೆಗಳು ಅಗತ್ಯ, ಶಕ್ತಿ ವಿದ್ಯಾಸಂಸ್ಥೆಯಲ್ಲಿ ಸಾಹಿತ್ಯ ಸಪ್ತಾಹದಲ್ಲಿ ಡಾ.ಕೆ.ಸಿ.ನಾಕ್ ಅಭಿಮತ

shakthi
ಶಕ್ತಿ ವಿದ್ಯಾಸಂಸ್ಥೆಯಲ್ಲಿ ಸಾಹಿತ್ಯ ಸಪ್ತಾಹ ಅಂಗವಾಗಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಬುಧವಾರ ನಡೆಯಿತು. ಶಕ್ತಿ ವಿದ್ಯಾಸಂಸ್ಥೆಯ ಸಂಸ್ಥಾಪಕ ಡಾ.ಕೆ.ಸಿ.ನಾಕ್, ಪ್ರಧಾನ ಸಲಹೆಗಾರ ರಮೇಶ ಕೆ. ಉಪಸ್ಥಿತರಿದ್ದರು.
Published on

ಮಂಗಳೂರು: ಶಕ್ತಿ ವಿದ್ಯಾಸಂಸ್ಥೆಯಲ್ಲಿ ಸಾಹಿತ್ಯ ಸಪ್ತಾಹ ಅಂಗವಾಗಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಬುಧವಾರ ನಡೆಯಿತು. ವಿದ್ಯಾರ್ಥಿಗಳು ಕನ್ನಡ, ಹಿಂದಿ, ಇಂಗ್ಲೀಷ್ ಭಾಷೆಗಳ ಅಭಿನಯ ಗೀತೆ, ಕಥೆ ಹಾಗೂ ವಿವಿಧ ಕಾರ್ಯಕ್ರಮ ಪ್ರಸ್ತುತಪಡಿಸಿದರು.

ಅಧ್ಯಕ್ಷತೆ ವಹಿಸಿದ್ದ ಸಂಸ್ಥೆ ಸಂಸ್ಥಾಪಕ ಡಾ.ಕೆ.ಸಿ.ನಾಕ್ ಮಾತನಾಡಿ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಪಠ್ಯೇತರ ಚಟುವಟಿಕೆಗಳು ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಅಗತ್ಯ. 1ರಿಂದ 5ನೇ ತರಗತಿಯ ಮಕ್ಕಳು ಹೆಚ್ಚು ಚಟುವಟಿಕೆಗಳ ಮೂಲಕವೇ ವಿಷಯವನ್ನು ಕಲಿಯುತ್ತಾರೆ. ಮಗುವಿನ ಸರ್ವಾಂಗೀಣ ಅಭಿವೃದ್ಧಿಗೆ ಶಕ್ತಿ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಸದಾ ಬದ್ಧವಾಗಿದೆ ಎಂದರು

ಸಂಸ್ಥೆಯ ಪ್ರಧಾನ ಸಲಹೆಗಾರ ರಮೇಶ ಕೆ., ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲ ರವಿಶಂಕರ್ ಹೆಗಡೆ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಕನಿಷ್ಕಾ ಸ್ವಾಗತಿಸಿ, ವೃಷ್ಟಿ ವಂದಿಸಿದರು. ಸಾನ್ವಿ ಬಂಗೇರ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net