

ಮಂಗಳೂರು : ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘದ ವತಿಯಿಂದ ಶಿಕ್ಷಣ ಭೀಷ್ಮ ಪ್ರಶಸ್ತಿ ಪಡೆದ ಶಕ್ತಿ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಡಾ. ಕೆ.ಸಿ.naik ಅವರನ್ನು ಸಂಸ್ಥೆಯ ಸಭಾಂಗಣದಲ್ಲಿ ಶಕ್ತಿ ವಿದ್ಯಾ ಸಂಸ್ಥೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಸನ್ಮಾನಿಸಿದರು.
ಮುಖ್ಯ ಅತಿಥಿಯಾಗಿದ್ದ ಶಿಕ್ಷಣ ತಜ್ಞ ಡಾ. ಎನ್.ಸಂತೋಷ್ ಕುಮಾರ್ ಮಾತನಾಡಿ ‘ ಶಕ್ತಿ ವಿದ್ಯಾ ಸಂಸ್ಥೆಯೊಂದು ಮಾದರಿ ವಿದ್ಯಾ ಸಂಸ್ಥೆಯಾಗಿದೆ. ಇಲ್ಲಿ ವಿದ್ಯಾರ್ಥಿಯ ಸರ್ವತೋಮುಖ ಬೆಳವಣಿಗೆಗೆ ಬೇಕಾದ ಸಕಲ ಸೌಲಭ್ಯವು ಇದೆ. ಭಾರತೀಯ ಸಂಸ್ಕಾರದೊಂದಿಗೆ ಮೌಲ್ಯಯುತ ಶಿಕ್ಷಣವನ್ನು ನೀಡುತ್ತಿದೆ. ಇಂತಹ ಸಂಸ್ಥೆಯನ್ನು ಕಟ್ಟಿದ ಡಾ. ಕೆ.ಸಿ. naik ನಮಗೆಲ್ಲ ಸ್ಫೂರ್ತಿಯಾಗಿದ್ದಾರೆ ಎಂದರು.
ಸನ್ಮಾನ ಸ್ವೀಕರಿಸಿದ ಡಾ. ಕೆ.ಸಿ. naik ಅವರು ಮಾತನಾಡಿ ಪ್ರಶಸ್ತಿ ಬರಲು ನಾನೊಬ್ಬ ಕಾರಣನಲ್ಲ .ಇದು ಶಕ್ತಿ ವಿದ್ಯಾ ಸಂಸ್ಥೆಯಲ್ಲಿ
ಕಾರ್ಯ ನಿರ್ವಹಿಸುತ್ತಿರುವ ಪ್ರತಿಯೊಬ್ಬರಿಂದಲೂ ಈ ಸಾಧನೆ ಮಾಡಲು ಸಾಧ್ಯವಾಗಿದೆ ಎಂದರು.
ಡಾ. ಕೆ.ಸಿ.ನಾಕ್ ಅವರ ಕಾರ್ಯ ಸಾಧನೆ ಮತ್ತು ಅವರು ಬೆಳೆದು ಬಂದ ಹಾದಿಯ ಕುರಿತು ಸಾಕ್ಷೃ ಚಿತ್ರ ಪ್ರದರ್ಶಿಸಲಾಯಿತು.
ಸಂಸ್ಥೆಯ ಪ್ರಧಾನ ಸಲಹೆಗಾರ ರಮೇಶ್.ಕೆ., ಶಕ್ತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವೆಂಕಟೇಶ್ ಮೂರ್ತಿ, ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲೆ ಬಬಿತಾ ಸೂರಜ್ ಉಪಸ್ಥಿತರಿದ್ದರು. ಶಿಕ್ಷಕ ಶರಣಪ್ಪ ಕಾರ್ಯಕ್ರಮ ನಿರೂಪಿಸಿದರು.