

ಮಂಡ್ಯ: ನೂತನ ಜಿಲ್ಲಾಧಿಕಾರಿಯಾಗಿ ಡಾ.ಕುಮಾರ ಅವರನ್ನು ರಾಜ್ಯಸರ್ಕಾರ ನೇಮಕ ಮಾಡಿದೆ. ಅಂತೆಯೇ ಜಿಲ್ಲಾಧಿಕಾರಿಯಾಗಿದ್ದ ಡಾ.ಎಚ್.ಎನ್.ಗೋಪಾಲಕೃಷ್ಣ ಅವರನ್ನು ವರ್ಗಾವಣೆ ಮಾಡಿದ್ದು, ಯಾವುದೇ ಸ್ಥಳ ನಿಯೋಜನೆ ಮಾಡಿಲ್ಲ.
ಡಾ.ಕುಮಾರ ಅವರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇವರು 2015ನೇ ಬ್ಯಾಚ್‌ನಲ್ಲಿ ಐಎಎಸ್ ಪದವಿ ಪಡೆದಿದ್ದಾರೆ.