ಆ.23ರಂದು ಡಾ.ಎಂ.ಮೋಹನ ಆಳ್ವ ರಿಗೆ ಎಮಿನೆಂಟ್ ಬಂಟ್ ಪರ್ಸನಾಲಿಟಿ ಅವಾರ್ಡ್

mng-19aug-dr.mohan alva
Published on


ಮಂಗಳೂರು : ವಿಶ್ವ ಬಂಟ ಪ್ರತಿಷ್ಠಾನ ಟ್ರಸ್ಟ್‌ನ 29ನೇ ವಾರ್ಷಿಕ ಮಹಾಸಭೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಆ.23ರಂದು ನಗರದ
ಎ.ಜೆ.ಗ್ರಾೃಂಡ್ ಹೋಟೆಲ್‌ನಲ್ಲಿ ನಡೆಯಲಿದೆ. ಬೆಳಗ್ಗೆ 11ಕ್ಕೆ ವಿಶ್ವ ಬಂಟ ಪ್ರತಿಷ್ಠಾನ ಟ್ರಸ್ಟ್ ಅಧ್ಯಕ್ಷ ಡಾ.ಎ.ಜೆ.ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ವಾರ್ಷಿಕ ಮಹಾಸಭೆ ನಡೆಯಲಿದೆ. ಮಧ್ಯಾಹ್ನ 12ಕ್ಕೆ ಮೂಡುಬಿದಿರೆಯ ಆಳ್ವಾಸ್ ಎಜ್ಯುಕೇಶನ್ ಟ್ರಸ್ಟ್‌ನ ಚೇರ್ಮನ್ ಡಾ.ಎಂ.ಮೋಹನ ಆಳ್ವ ಅವರಿಗೆ ‘ಎಮಿನೆಂಟ್ ಬಂಟ್ ಪರ್ಸನಾಲಿಟಿ ಅವಾರ್ಡ್ ’ ಪ್ರದಾನ ಮಾಡಲಾಗುವುದು.
ಹಿರಿಯ ಯಕ್ಷಗಾನ ಕಲಾವಿದ ಸಂಜಯ ಕುಮಾರ್ ಶೆಟ್ಟಿ ಗೋಣಿಬೀಡು ಅವರಿಗೆ ದಿ.ಡಾ.ಡಿ.ಕೆ.ಚೌಟ ದತ್ತಿನಿಧಿ ಪ್ರಶಸ್ತಿ, ಕೃಷಿ ಕ್ಷೇತ್ರದ ಸಾಧನೆಗಾಗಿ ಇಂದಿರಾ ಶೆಟ್ಟಿ ಅವರಿಗೆ ದಿ.ಎಣ್ಮಕಜೆ ಕಲಾವತಿ ಶೆಟ್ಟಿ ದತ್ತಿನಿಧಿ ಪ್ರಶಸ್ತಿ, ಸಿಎ ಅಂತಿಮ ಪರೀಕ್ಷೆಯಲ್ಲಿ 24ನೇ ರ‌್ಯಾಂಕ್ ಪಡೆದ
ಸಿಎ ನಿಶ್ಚಲ್ ರೈ ಅವರಿಗೆ ಸಿಎ ವೈ.ಆರ್.ಶೆಟ್ಟಿ ದತ್ತಿನಿಧಿ ಪ್ರಶಸ್ತಿ ಹಾಗೂ ಸಿಎ ರಕ್ಷಾ. ಆರ್.ಶೆಟ್ಟಿ ಅವರಿಗೆ ಸಿಎ ಗೋಪಾಲ್.ಬಿ.ಶೆಟ್ಟಿ ದತ್ತಿನಿಧಿ ಪ್ರಶಸ್ತಿ ವಿತರಿಸಲಾಗುವುದೆಂದು ವಿಶ್ವ ಬಂಟ ಪ್ರತಿಷ್ಠಾನದ ಕಾರ್ಯದರ್ಶಿ ಸಿಎ ಸುಧೀರ್ ಕುಮಾರ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net