

ವಿಜಯವಾಣಿ ಸುದ್ದಿಜಾಲ ಧಾರವಾಡ
ಇಳಕಲ್ಲ ಚಿತ್ತರಗಿ ಮಹಾಂತಮಠದ ಡಾ. ಮಹಾಂತ ಶಿವಯೋಗಿ ಅಪ್ಪಗಳು ವ್ಯಸನಮುಕ್ತ ಸಮಾಜ ನಿರ್ಮಾಣಕ್ಕಾಗಿ ನಿರಂತರವಾಗಿ ಶ್ರಮಿಸಿದ್ದಾರೆ. ಅವರು ತೋರಿದ ದಾರಿಯಲ್ಲಿ ಪ್ರತಿಯೊಬ್ಬರೂ ಸಾಗಿದರೆ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
ಜಿಲ್ಲಾಡಳಿತದಿಂದ ಡಿಮ್ಹಾನ್ಸ್ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಹಾಗೂ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.
ದುಶ್ಚಟಗಳಿಂದ ಆರೋಗ್ಯ ಹಾಳಾಗುವುದಲ್ಲದೆ, ಆರ್ಥಿಕ ಸಂಕಷ್ಟ ಎದುರಾಗುತ್ತದೆ. ದುಶ್ಚಟಗಳಿಗೆ ದಾಸರಾಗಿ ನಿತ್ಯ ಕಣ್ಣೀರಿಡುವ ಕುಟುಂಬಗಳಿಗೆ ನೆಮ್ಮದಿ ಕಲ್ಪಿಸಿದ ಶ್ರೇಯಸ್ಸು ಮಹಾಂತ ಶಿವಯೋಗಿಗಳಿಗೆ ಸಲ್ಲುತ್ತದೆ. ಮಹಾಂತ ಅಪ್ಪಗಳು ವ್ಯಸನ ಮುಕ್ತ ಸಮಾಜ ರೂಪಿಸಲು ಜೋಳಿಗೆ ಹಾಕಿದ್ದು ಮಾತ್ರವಲ್ಲ, ಹೊರದೇಶದಲ್ಲೂ ವ್ಯಸನ ಮುಕ್ತ ಸಮಾಜಕ್ಕಾಗಿ ಕಾರ್ಯಕ್ರಮ ಮಾಡಿ ಸಮಾಜ ಸುಧಾರಣೆಗೆ ಶ್ರಮಿಸಿದರು ಎಂದರು.
ಸಾನ್ನಿಧ್ಯ ವಹಿಸಿದ್ದ ಮನಗುಂಡಿ ಮಹಾಮನೆಯ ಶ್ರೀ ಬಸವಾನಂದ ಸ್ವಾಮೀಜಿ ಮಾತನಾಡಿ, ಸಕ್ಕರೆ ಕಾಯಿಲೆ, ಹೃದಯ ರೋಗ, ಕ್ಯಾನ್ಸರ್ ಹಾಗೂ ಇತರ ರೋಗಗಳ ತಡೆಗೆ ಉತ್ತಮ ಆಹಾರ ಪದ್ಧತಿ, ಉತ್ತಮ ಹವ್ಯಾಸಗಳು ಪರಿಹಾರ. ಶರಣ ಮಾರ್ಗದಲ್ಲಿ ನಡೆದರೆ ಯಾವ ಚಟಗಳ ಬಾಧೆಯೂ ಇರುವದಿಲ್ಲ ಎಂದರು.
ಡಿಮ್ಹಾನ್ಸ್ನ ಟೆಲಿಮಾನಸ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಸುಧಿ೦ದ್ರ ಹುದ್ದಾರ ಮಾನಸಿಕ ಆರೋಗ್ಯ ಮತ್ತು ವ್ಯಸನ ಮುಕ್ತತೆಯ ಉಪಾಯಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಹು-ಧಾ ಪೊಲೀಸ್ ಆಯುಕ್ತ ಎನ್. ಶಶಿಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿ ಡಾ. ಗೋಪಾಲ ಬ್ಯಾಕೋಡ, ಅಪರ ಜಿಲ್ಲಾಽಕಾರಿ ಗೀತಾ ಸಿ.ಡಿ., ಡಿಡಿಪಿಐ ಎಸ್.ಎಸ್. ಕೆಳದಿಮಠ, ಡಿಮ್ಹಾನ್ಸ್ ನಿರ್ದೇಶಕ ಡಾ. ಅರುಣಕುಮಾರ ಸಿ., ಇತರರಿದ್ದರು.
ಕಾರ್ಯಕ್ರಮದಲ್ಲಿ ವ್ಯಸನ ಮುಕ್ತ ದಿನಾಚರಣೆಯ ಪ್ರತಿಜ್ಞಾ ವಿಽ ಬೋಽಸಲಾಯಿತು. ಡಾ. ಸುರೇಶ ಹಿರೇಮಠ ಸ್ವಾಗತಿಸಿದರು. ಅಶೋಕ ಕೋರಿ ವಂದಿಸಿದರು.