

ಧಾರವಾಡ: ಡಾ. ಮಲ್ಲಿಕಾರ್ಜುನ ಮನಸೂರ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ವತಿಯಿಂದ ಪದ್ಮವಿಭೂಷಣ ಡಾ. ಮಲ್ಲಿಕಾರ್ಜುನ ಮನಸೂರ ಅವರ ೧೧೩ನೇ ಜನ್ಮದಿನಾಚರಣೆ ಹಾಗೂ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ಸಂಗೀತೋತ್ಸವ ಕಾರ್ಯಕ್ರಮವನ್ನು ಡಿ. 31ರಂದು ಸಂಜೆ 5.30 ಗಂಟೆಗೆ ನಗರದ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಏರ್ಪಡಿಸಲಾಗಿದೆ.
2023ನೇ ಸಾಲಿನ ರಾಷ್ಟ್ರೀಯ ಪ್ರಶಸ್ತಿಯನ್ನು ಖ್ಯಾತ ಹಿಂದೂಸ್ತಾನಿ ಶಾಸ್ತಿçÃಯ ಸಂಗೀತಗಾರ ಮುಂಬೈನ ಪಂ. ವಿದ್ಯಾಧರ ವ್ಯಾಸ್ ಅವರಿಗೆ ಪ್ರದಾನ ಮಾಡಲಾಗುವುದು. ತಬಲಾ ಕಲಾವಿದ ಧಾರವಾಡದ ಪಂ. ಡಾ. ರವಿಕಿರಣ ನಾಕೋಡ ಹಾಗೂ ಗದಗನ ಹಿಂದೂಸ್ತಾನಿ ಶಾಸ್ತಿçÃಯ ಸಂಗೀತಗಾರ ಪಂ. ವೆಂಕಟೇಶ ಆಲಕೋಡ ಅವರಿಗೆ ರಾಷ್ಟ್ರೀಯ ಯುವ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಗೌರವ ಉಪಸ್ಥಿತರಿರುವರು. ಕಾರ್ಮಿಕ ಸಚಿವ ಸಂತೋಷ ಲಾಡ್ ಪ್ರಶಸ್ತಿ ಪ್ರದಾನ ಮಾಡುವರು. ಶಾಸಕ ಅರವಿಂದ ಬೆಲ್ಲದ ಅಧ್ಯಕ್ಷತೆ ವಹಿಸುವರು. ೩೧ರಂದು ಬೆಳಗ್ಗೆ ೯.೩೦ ಗಂಟೆಗೆ ಡಾ. ಮಲ್ಲಿಕಾರ್ಜುನ ಮನಸೂರ ಟ್ರಸ್ಟ್ನಲ್ಲಿ ಡಾ. ಮಲ್ಲಿಕಾರ್ಜುನ ಮನಸೂರ ಅವರ ಸಮಾಽಗೆ ಪೂಜೆ ನೆರವೇರಿಸಲಾಗುವುದು. ನಂತರ ಅಕ್ಕಮಹಾದೇವಿ ಆಲೂರ, ಡಾ. ಚಂದ್ರಿಕಾ ಕಾಮತ್ ಹಾಗೂ ಉಜಿರೆಯ ಮಿಥುನ ಚಕ್ರವರ್ತಿ ಅವರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ. ಸಂಜೆ ೭.೩೦ರಿಂದ ಪ್ರಶಸ್ತಿ ಪುರಸ್ಕೃತರಿಂದ ಸಂಗೀತ ಕಾರ್ಯಕ್ರಮವಿದೆ.