ಮಕ್ಕಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿ ಡಾ. ಮಲ್ಲಿಕಾರ್ಜುನ ಸ್ವಾಮೀಜಿ ಸಲಹೆ

8MDG1 PRATIBHA KARANJI
Published on

ಮುಂಡರಗಿ: ಪ್ರತಿಯೊಬ್ಬರಲ್ಲೂ ಪ್ರತಿಭೆ ಅಡಗಿರುತ್ತದೆ. ಮಗುವಿನಲ್ಲಿರುವ ಪ್ರತಿಭೆ ಗುರುತಿಸುವ ಶಕ್ತಿ ಶಿಕ್ಷಕರಲ್ಲಿರುತ್ತದೆ. ಪ್ರತಿಭಾವಂತ ಮಕ್ಕಳಿಗೆ ಪೋ›ತ್ಸಾಹ ನೀಡಿದರೆ ಉನ್ನತ ಸಾಧನೆ ಸಾಧ್ಯವಾಗಲಿದೆ ಎಂದು ಜಗದ್ಗುರು ಅನ್ನದಾನೀಶ್ವರ ಸಂಸ್ಥಾನಮಠದ ಉತ್ತರಾಧಿಕಾರಿ ಡಾ. ಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.


ಪಟ್ಟಣದ ಜಗದ್ಗುರು ಅನ್ನದಾನೀಶ್ವರ ಸಂಸ್ಥಾನಮಠದಲ್ಲಿ ಜ. ಅ. ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಕ್ಷೇತ್ರ ಸಂಪನ್ಮೂಲ ಕೇಂದ್ರ, ಸಮೂಹ ಸಂಪನ್ಮೂಲ ಕೇಂದ್ರದ ಆಶ್ರಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.


ಅಧ್ಯಕ್ಷತೆ ವಹಿಸಿದ್ದ ಜ.ಅ. ಆಂಗ್ಲ ಮಾಧ್ಯಮ ಶಾಲಾ ಸುಧಾರಣಾ ಸಮಿತಿಯ ಅಧ್ಯಕ್ಷ ಡಾ. ಅನ್ನದಾನಿ ಮೇಟಿ ಮಾತನಾಡಿ, ಪಾಲಕರು ತಮ್ಮ ಮಕ್ಕಳಿಗೆ ಪಠ್ಯದ ಜತೆಗೆ ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಉತ್ತೇಜನ ನೀಡಬೇಕು. ಶಿಕ್ಷಕರು, ಪಾಲಕರು ಜವಾಬ್ದಾರಿ ವಹಿಸಿ ಮಕ್ಕಳಲ್ಲಿರುವ ಪ್ರತಿಭೆ ಗುರುತಿಸಿ ಹೊರತರಲು ಶ್ರಮಿಸಬೇಕು ಎಂದರು.


ಬಿಇಒ ಗಂಗಾಧರ ಅಣ್ಣಿಗೇರಿ ಮಾತನಾಡಿದರು, ಶಾಲೆ ಮುಖ್ಯಶಿಕ್ಷಕಿ ಎಸ್.ಬಿ. ಹಳ್ಳಿಗುಡಿ, ಹನುಮರೆಡ್ಡಿ ಇಟಗಿ, ಬಿ.ಎಚ್. ಸೂಡಿ, ಎಸ್.ಡಿ. ಬಸೇಗೌಡ್ರ, ಎಂ.ಪಿ. ಶೀರನಹಳ್ಳಿ, ಎನ್.ಎಂ. ಕುಕನೂರು, ಐ.ಎಸ್. ಮುಲ್ಲಾ, ಎಲ್.ಆರ್. ಮಟ್ಟಿ, ಉಪಸ್ಥಿತರಿದ್ದರು.


ಅಮೂಲ್ಯ ಹಂಪಿಮಠ ತಂಡವರು ಪ್ರಾರ್ಥಿನಿಸಿದರು. ವಿ.ಎಚ್. ಹೊಳೆಮ್ಮಣ್ಣವರ ಪ್ರಾಸ್ತವಿಕವಾಗಿ ಮಾತನಾಡಿದರು. ಮುಖ್ಯಶಿಕ್ಷಕ ವೆಂಕಟೇಶ ದಾಸಕನಕಪ್ಪನವರ ಸ್ವಾಗತಿಸಿದರು. ಶಿಕ್ಷಕಿ ಶಕುಂತಲಾ ಹಂಪಿಮಠ ನಿರೂಪಿಸಿದರು. ರಾಜಶೇಖರ ಕಡಿವಾಳರ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net