ಬುಕರ್ ಪ್ರಶಸ್ತಿ ಪುರಸ್ಕೃತರಿಗೆ 10 ಲಕ್ಷ ರೂ. ಕೊಡಿ -ಮನು ಬಳಿಗಾರ್ ಒತ್ತಾಯ

Manu Baligar
Published on

ಬೆಂಗಳೂರು: ಕನ್ನಡಕ್ಕೆ ಪ್ರತಿಷ್ಠಿತ ಬುಕರ್ ಪ್ರಶಸ್ತಿ ದೊರಕಿಸಿಕೊಟ್ಟ ಲೇಖಕಿ ಬಾನು ಮುಷ್ತಾಕ್ ಹಾಗೂ ಅನುವಾದಕಿ ದೀಪಾ ಭಾಸ್ತಿ ಅವರಿಗೆ ರಾಜ್ಯ ಸರ್ಕಾರ ತಲಾ 10 ಲಕ್ಷ ರೂ. ವಿಶೇಷ ಗೌರವಧನ ನೀಡಬೇಕು ಎಂದು

ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಡಾ. ಮನು ಬಳಿಗಾರ್ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಬೂಕರ್ ಪ್ರಶಸ್ತಿ ಮೊತ್ತವಾಗಿ ಲಭಿಸಿರುವ ಹಣಕ್ಕೂ ಕೇಂದ್ರ ಸರ್ಕಾರ ಶೇ. 30 ತೆರಿಗೆ ವಿಧಸಿದ್ದು, ಇದರಿಂದ ಪುರಸ್ಕೃತರು ಪೂರ್ಣ ಪ್ರಮಾಣದಲ್ಲಿ ಹಣ ಪಡೆಯಲು ಸಾಧ್ಯವಿಲ್ಲ. ಹಾಗೆ ಮಾಡಲು ನಮ್ಮ ಕಾನೂನಿನ ಅಡಿಯಲ್ಲಿ ಅವಕಾಶ ಸಹ ಇಲ್ಲ. ಹಾಗಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕ ಹಾಗೂ ಭಾರತಕ್ಕೆ ಕೀರ್ತಿ ತಂದಿರುವ ಇಬ್ಬರಿಗೂ ರಾಜ್ಯ ಸರ್ಕಾರದಿಂದ ಗೌರವಧನ ನೀಡಬೇಕು ಎಂದು ಕೋರಿದ್ದಾರೆ.

ಈ ಹಿಂದೆ ಡಾ. ಚಂದ್ರಶೇಖರ ಕಂಬಾರ ಅವರಿಗೆ ಜ್ಞಾನಪೀಠ ಪ್ರಶಸ್ತಿ ಲಭಿಸಿದ್ದ ಸಂದರ್ಭದಲ್ಲಿ ಹಾಗೂ ಎಸ್.ಎಲ್. ಭೈರಪ್ಪ ಅವರಿಗೆ ಸರಸ್ವತಿ ಸಮ್ಮಾನ್ ಪ್ರಶಸ್ತಿ ಬಂದಾಗ 5 ಲಕ್ಷ ರೂ. ಗೌರವಧನ ನೀಡಲಾಗಿತ್ತು. ಆದರೆ ಭೈರಪ್ಪನವರು ಆ ಹಣವನ್ನು ಸರ್ಕಾರಿ ಕನ್ನಡ ಶಾಲೆಗಳ ಅಭಿವೃದ್ಧಿಗಾಗಿ ಬಳಸುವಂತೆ ಸರ್ಕಾರಕ್ಕೆ ಹಿಂತಿರುಗಿಸಿದ್ದರು ಎಂಬುದನ್ನು ಸ್ಮರಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net