ಅಡಿಕೆ ಬೆಳೆಗಾರರ ಸಂಕಷ್ಟಕ್ಕೆ ಎಂಎನ್‌ಆರ್ ಸ್ಪಂದನೆ

allwyn_23218_mnr
Published on


ಮಂಗಳೂರು : ನಿರಂತರ ಸುರಿದ ಮಳೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಕೆ ತೋಟಗಳಿಗೆ ಕೊಳೆ ರೋಗ ಹರಡಿದೆ. ಇದರಿಂದ ಶೇ.50 ಕ್ಕಿಂತ ಹೆಚ್ಚು ಬೆಳೆ ನಾಶವಾಗಿದ್ದು ಕೃಷಿಕರ ಆದಾಯಕ್ಕೆ ಬರೆ ಬಿದ್ದಂತಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್
ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದ್ದಾರೆ.
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಆರ್ಥಿಕತೆಯು ಕೃಷಿ ಆಧಾರಿತವಾಗಿದ್ದು ಇಲ್ಲಿನ ಕೃಷಿಕರು ಹೆಚ್ಚಾಗಿ ಅಡಕೆ ಬೆಳೆಯನ್ನು ತಮ್ಮ ಜೀವನಾಧಾರವಾಗಿಸಿಕೊಂಡಿದ್ದಾರೆ. ಅಡಕೆ ಬೆಳೆಯ ಬೆಲೆ ಏರಿಳಿತ ಹಾಗೂ ಅಡಕೆ ಉತ್ಪನ್ನದ ಪ್ರಮಾಣದಲ್ಲಿ ಏರಿಳಿತವು ಇಲ್ಲಿನ ಜನ ಜೀವನವನ್ನು ತೀವ್ರವಾಗಿ ಸಂಕಷ್ಟಕ್ಕೀಡು ಮಾಡುತ್ತದೆ. ಅಡಕೆಹೆ ಕೊಳೆ ರೋಗದ ಜತೆಗೆ ಹಳದಿ ರೋಗದ ಬಾಧೆಯು ಹೆಚ್ಚು ಕಂಡು ಬರುತ್ತಿರುವ ಕಾರಣ ಅಡಕೆ ಬೆಳೆಗಾರರನ್ನು ಕಂಗೆಡಿಸಿದೆ. ಇದರಿಂದ ರೈತರು ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಎಸ್‌ಸಿಡಿಸಿಸಿ ಬ್ಯಾಂಕ್
ಯಾವಾಗಲೂ ರೈತರ ಪರವಾಗಿದ್ದು ಅಡಕೆ ಕೊಳೆ ರೋಗದ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗುವುದೆಂದು ಅವರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net