

ಹುಬ್ಬಳ್ಳಿ : ಜಗದ್ಗುರು ಡಾ. ಗಂಗಾಧರ ರಾಜಯೋಗೀಂದ್ರ ಸ್ವಾಮೀಜಿ ಅವರ 21ನೇ ಪುಣ್ಯ ಸ್ಮರಣೋತ್ಸವ ಹಾಗೂ ಡಾ. ಮೂಜಗಂ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮೇ 26ರಂದು ಬೆಳಗ್ಗೆ 11 ಗಂಟೆಗೆ ಇಲ್ಲಿನ ಮೂರುಸಾವಿರ ಮಠ ಮಹಾಸಂಸ್ಥಾನ ಶಾಲಾ ಆವರಣದ ಡಾ. ಮೂಜಗಂ ಸಭಾಭವನದಲ್ಲಿ ಆಯೋಜಿಸಲಾಗಿದೆ.
ಜಗದ್ಗುರು ಡಾ. ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಎರಡೆತ್ತಿನಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ, ರುದ್ರಾಕ್ಷಿಮಠದ ಶ್ರೀ ಬಸವಲಿಂಗ ಸ್ವಾಮೀಜಿ, ನವಲಗುಂದ ವಿರಕ್ತಮಠದ ಶ್ರೀ ಬಸವಲಿಂಗ ಸ್ವಾಮೀಜಿ, ರಾಯನಾಳ ರೇವಣಸಿದ್ದೇಶ್ವರಮಠದ ಶ್ರೀ ಅಭಿನವ ರೇವಣಸಿದ್ದೇಶ್ವರ ಸ್ವಾಮೀಜಿ ಸಮ್ಮುಖ ವಹಿಸುವರು.
ಸಭಾಪತಿ ಬಸವರಾಜ ಹೊರಟ್ಟಿ ಅಧ್ಯಕ್ಷತೆ ವಹಿಸುವರು. ಮಾಜಿ ಮುಖ್ಯಮಂತ್ರಿಗಳಾದ ಜಗದೀಶ ಶೆಟ್ಟರ್, ಬಸವರಾಜ ಬೊಮ್ಮಾಯಿ, ಮಾಜಿ ಸಂಸದ ಹಾಗೂ ಉದ್ಯಮಿ ಡಾ. ವಿಜಯ ಸಂಕೇಶ್ವರ, ಮಾಜಿ ಸಭಾಪತಿ ವೀರಣ್ಣ ಮತ್ತಿಕಟ್ಟಿ, ವಿಧಾನ ಪರಿಷತ್ ಮಾಜಿ ಸದಸ್ಯ ಮೋಹನ ಲಿಂಬಿಕಾಯಿ, ಕೆಎಲ್ಇ ನಿರ್ದೇಶಕ ಶಂಕರಣ್ಣ ಮುನವಳ್ಳಿ, ಪಾಲಿಕೆ ಸದಸ್ಯೆ ಸುನಿತಾ ಬುರಬುರೆ ಅತಿಥಿಗಳಾಗಿ ಪಾಲ್ಗೊಳ್ಳುವರು.