

ಹಾಸನ: ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಡಾ.ಬಿ.ಸಿ. ನವೀನ್ ಕುಮಾರ್ ನೇತೃತ್ವದ ತಂಡ ಹಾಸನ ಜಿಲ್ಲೆಯ ಸಕಲೇಶಪುರ ಮತ್ತು ಬೇಲೂರು ತಾಲೂಕಿನ ಅತಿಯಾದ ಮಳೆಯಿಂದ ಹಾನಿಗೊಳಗಾಗಿರುವ ರೈತರ ಜಮೀನುಗಳಿಗೆ ಮಂಗಳವಾರ ಭೇಟಿ ನೀಡಿ ರೈತರೊಂದಿಗೆ ಸಂವಾದ ನಡೆಸಿ ಅವರಿಗೆ ಸಾಂತ್ವನ ಹೇಳಿತು. ಹಾಸನ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿದ್ದೇಶ್ ನಾಗೇಂದ್ರ, ಪ್ರಧಾನ ಕಾರ್ಯದರ್ಶಿ ಅಮಿತ್ ಶೆಟ್ಟಿ, ಜಿಲ್ಲಾ ರೈತ ಮೋರ್ಚಾದ ಅಧ್ಯಕ್ಷ ನಾರಾಯಣ ಗೌಡ, ಜಿಲ್ಲಾ ರೈತ ಮೋರ್ಚಾದ ಪ್ರಧಾನ ಕಾರ್ಯದರ್ಶಿ ನಟರಾಜ್ ಹಾಗೂ ರೈತ ಮೋರ್ಚಾದ ಪದಾಧಿಕಾರಿಗಳು ಇದ್ದರು.