ಡಾ. ಪ್ರಭಾಕರ ಕೋರೆ ಸೇವೆ ಎಲ್ಲರಿಗೂ ಮಾದರಿ

h1-g.k.law college
Published on

ಹುಬ್ಬಳ್ಳಿ: ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಅವರ 77ನೇ ಜನ್ಮ ದಿನ ನಿಮಿತ್ತ ಇಲ್ಲಿಯ ಕೆಎಲ್‌ಇ ಸಂಸ್ಥೆಯ ಗುರುಸಿದ್ದಪ್ಪ ಕೊತಂಬರಿ ಕಾನೂನು ಮಹಾವಿದ್ಯಾಲಯದಲ್ಲಿ ಗುರುವಾರ ಸಸಿ ನೆಡಲಾಯಿತು.
ಪ್ರಾಚಾರ್ಯ ಡಾ. ಜ್ಞಾನೇಶ್ವರ ಪಿ. ಚೌರಿ ಮಾತನಾಡಿ, ಡಾ. ಪ್ರಭಾಕರ ಕೋರೆ ಅವರು ಶಿಕ್ಷಣ ಕ್ಷೇತ್ರದಲ್ಲಿ ಮಹತ್ತರ ಸಾಧನೆ ಮಾಡಿದ್ದಾರೆ. ಸಾಮಾಜಿಕ ಕ್ಷೇತ್ರದಲ್ಲಿಯೂ ಅನೇಕ ಕೊಡುಗೆ ನೀಡಿದ್ದಾರೆ. ಅವರ ಸೇವೆ ಸ್ಮರಣೀಯ ಮತ್ತು ಎಲ್ಲರಿಗೂ ಮಾದರಿ ಎಂದು ಬಣ್ಣಿಸಿದರು. ವಿದ್ಯಾರ್ಥಿಗಳು, ಉಪನ್ಯಾಸಕರು ಮತ್ತು ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net