ಪುನೀತ್ ಸಮಾಜ ಸೇವೆ ಎಂದಿಗೂ ಜೀವಂತ

Dr. Puneeth Rajkumar 2nd Commemoration
ಡಾ.ಪುನೀತ್ ರಾಜ್‌ಕುಮಾರ್ 2ನೇ ಪುಣ್ಯಸ್ಮರಣೆ
Published on

ವಿಜಯವಾಣಿ ಸುದ್ದಿಜಾಲ ನೆಲಮಂಗಲ
ಪವರ್ ಸ್ಟಾರ್ ಪುನೀತ್‌ರಾಜಕುಮಾರ್ ಕನ್ನಡ ಚಿತ್ರರಂಗದ ಆದರ್ಶ ನಟರಾಗಿದ್ದು, ಅವರ ಸಮಾಜಮುಖಿ ಕಾರ್ಯಗಳು ಎಂದೆಂದಿಗೂ ಜೀವಂತವಾಗಿರಲಿ ಎಂದು ರೋಟರಿ ಅಧ್ಯಕ್ಷ ಎಂ.ಟಿ.ನವೀನ್‌ಕುಮಾರ್ ಹೇಳಿದರು.
ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಟರಿ ಸಂಸ್ಥೆಯಿಂದ ದಿ.ನಟ ಪವರ್‌ಸ್ಟಾರ್ ಡಾ.ಪುನೀತ್ ರಾಜ್‌ಕುಮಾರ್ 2ನೇ ಪುಣ್ಯಸ್ಮರಣೆ ಪ್ರಯುಕ್ತ ಹಮ್ಮಿಕೊಂಡಿದ್ದ ರೋಗಿಗಳಿಗೆ ಹಣ್ಣು ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಪುನೀತ್ ರಾಜ್‌ಕುಮಾರ್ ಅವರ ಸಮಾಜ ಮುಖಿ ಕಾರ್ಯಗಳು ಸಾಕಷ್ಟು ಮಂದಿಗೆ ದಾರಿ ದೀಪವಾಗಿದೆ ಎಂದ ಅವರು. ಮನುಷ್ಯನಿಗೆ ಆರೋಗ್ಯ ಅತ್ಯಂತ ಮುಖ್ಯವಾಗಿದ್ದು, ಅರೋಗ್ಯದ ಕಡೆ ಹೆಚ್ಚಿನ ಗಮನ ಹರಿಸಬೇಕಿದೆ ಎಂದರು. ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಸೋನಿಯಾ ಮಾತನಾಡಿ, ಪುನೀತ್ ರಾಜ್‌ಕುಮಾರ್ ಅವರು ನಾಡು-ನುಡಿ, ಕಲೆ, ಸಾಂಸ್ಕೃತಿಕ ಪರಂಪರೆಯ ಬಗ್ಗೆ ಅಪಾರ ಗೌರವ ಇಟ್ಟುಕೊಂಡಿದ್ದ ಪ್ರತಿಭಾವಂತ ನಟರಾಗಿದ್ದರು ಎಂದರು.
ರೋಟರಿ ಜಂಟಿ ಕಾರ್ಯದರ್ಶಿ ಶಿವಶಂಕರ್‌ಪ್ರಸಾದ್, ಆರೋಗ್ಯ ನಿರ್ದೇಶಕ ಸೋಮಶೇಖರ್, ರೋಟರಿ ಮಾಜಿ ಅಧ್ಯಕ್ಷ ಸಿ.ಜಿ.ಮಂಜುನಾಥ್, ನಿರ್ದೇಶಕ ಆರ್.ನಾಗರಾಜು, ರಾಜಶೇಖರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net