ಮೈಸೂರು:ಕರ್ನಾಟಕ ಚಲನಚಿತ್ರ ನೃತ್ಯ ನಿರ್ದೇಶಕರು ಹಾಗೂ ಕಲಾವಿದರ ಸಂಘದಿಂದ ಆಯೋಜಿಸಿದ್ದ ಡಾ.ರಾಜ್ ಕಪ್ ಕ್ರಿಕೆಟ್ ಪಂದ್ಯಾವಳಿಯ ಫೈನಲ್ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮವನ್ನು ಡಿ.7ರಂದು ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ರಾಜೇಶ್ ಬ್ರಹ್ಮಾವರ್ ತಿಳಿಸಿದರು.
ಮಾನಸಗಂಗೋತ್ರಿಯ ಗ್ಲೇಡ್ಸ್ ಮೈದಾನದಲ್ಲಿ ಅಂದು ಬೆಳಗ್ಗೆ 8 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದೆ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಅಂದು ಫೈನಲ್‌ನಲ್ಲಿ ಹತ್ತು ಓವರ್‌ಗಳ ಪಂದ್ಯ ನಡೆಯಲಿದೆ. ಅಶ್ವಿನಿ ಪುನೀತ್ ರಾಜ್‌ಕುಮಾರ್ ಸೇರಿದಂತೆ ಚಿತ್ರರಂಗದ ಬಹುತೇಕ ಎಲ್ಲ ಖ್ಯಾತ ತಾರೆಯರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.
ಪಂದ್ಯಾವಳಿಯ ಒಟ್ಟು 32 ಪಂದ್ಯಗಳು ದುಬೈನಲ್ಲಿ ನಡೆದಿವೆ. ಕಲಾವಿದರು, ತಂತ್ರಜ್ಞರು, ಚಿತ್ರೋದ್ಯಮ ಕಾರ್ಮಿಕರು ಪಾಲ್ಗೊಂಡಿದ್ದರು. ಹೀಗಾಗಿ ಫೈನಲ್ ಪಂದ್ಯ ಮತ್ತು ಬಹುಮಾನ ವಿತರಣಾ ಸಮಾರಂಭ ಮೈಸೂರಿನಲ್ಲಿ ನಡೆಯಬೇಕೆಂದು ಈ ಬಾರಿ ಇಲ್ಲಿ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಸಂಘದ ಪದಾಧಿಕಾರಿಗಳಾದ ಧರ್ಮ, ಸಿಂಪಲ್ ಸುನಿ, ಶಿವರಾಜ್ ಕೆ.ಆರ್.ಪೇಟೆ ಇದ್ದರು.