ಡಾ. ರಾಜಕುಮಾರ್​ ಜನ್ಮದಿನ ಆಚರಣೆ

Published on

ವಿಜಯಪುರ: ಜಿಲ್ಲಾಡಳಿತ, ಜಿ.ಪಂ. ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಏ. 24 ರಂದು 10.40ಕ್ಕೆ ನಗರದ ಕಂದಗಲ್ಲ ಹನುಮಂತರಾಯ ರಂಗಮಂದಿರಲ್ಲಿ ವರನಟ ಡಾ. ರಾಜಕುಮಾರ್​ ಅವರ 97ನೇ ಜನ್ಮ ದಿನ ಆಚರಣೆ ನಡೆಯಲಿದೆ.

ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಉದ್ಘಾಟಿಸುವರು. ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಸಕ್ಕರೆ ಸಚಿವ ಶಿವಾನಂದ ಪಾಟೀಲ, ವಿ.ಪ. ವಿಪಕ್ಷ ಮುಖ್ಯ ಸಚೇತಕ ರವಿಕುಮಾರ ಎನ್​., ನವದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ, ಕೆಎಸ್​ಡಿ ನಿಗಮದ ಅಧ್ಯಕ್ಷ, ಶಾಸಕ ಅಪ್ಪಾಜಿ ನಾಡಗೌಡ, ಸಂಸದ ರಮೇಶ ಜಿಗಜಿಣಗಿ, ರಾಜ್ಯಸಭಾ ಸದಸ್ಯೆ ಡಾ. ಸುಧಾ ಮೂರ್ತಿ, ಶಾಸಕರಾದ ಯಶವಂತರಾಯಗೌಡ ಪಾಟೀಲ, ವಿಠ್ಠಲ ಕಟಕಧೋಂಡ, ರಾಜುಗೌಡ ಪಾಟೀಲ, ಅಶೋಕ ಮನಗೂಳಿ, ವಿ.ಪ. ಸದಸ್ಯರಾದ ಹಣಮಂತ ನಿರಾಣಿ, ಸುನೀಲಗೌಡ ಪಾಟೀಲ, ಪಿ.ಎಚ್​. ಪೂಜಾರ, ಕೇಶವ ಪ್ರಸಾದ ಎಸ್​., ರಾಜ್ಯ ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯ್ಕ, ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹಾಗೂ ವಿಡಿಎ ಅಧ್ಯಕ್ಷ ಕನಾನ್​ ಮುಶ್ರೀಪ್​ ಭಾಗವಹಿಸುವರು.

ಜಿಲ್ಲಾಧಿಕಾರಿ ಟಿ. ಭೂಬಾಲನ್​, ಜಿ.ಪಂ. ಸಿಇಒ ರಿಷಿ ಆನಂದ ಹಾಗೂ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಲಕ್ಷ$್ಮಣ ನಿಂಬರಗಿ ಉಪಸ್ಥಿತಿರಿವರು.

ಕ್ರೀಡಾಧಿಕಾರಿ ರಾಜಶೇಖರ ದೈವಾಡಿ ಉಪನ್ಯಾಸ ಹಾಗೂ ಗಾಯಕ ವೀರೇಶ ವಾಲಿ ತಂಡದಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net