

ಬೆಂಗಳೂರು: ಸಾಮಾಜಿಕ ಹೋರಾಟಗಾರ್ತಿ ಇಂದಿರಾ ಕೃಷ್ಣಪ್ಪ ಅವರು ಪ್ರಸಕ್ತ ಸಾಲಿನ ‘ಡಾ. ರಾಮಮನೋಹರ ಲೋಹಿಯಾ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ.
ಭಾರತ ಯಾತ್ರಾ ಕೇಂದ್ರವು ಎಂ.ಪಿ. ಪ್ರಕಾಶ್ ಸಮಾಜಮುಖಿ ಟ್ರಸ್ಟ್ (ಹೂವಿನ ಹಡಗಲಿ) ಹಾಗೂ ಲೋಕನಾಯಕ ಜಯಪ್ರಕಾಶ್ ನಾರಾಯಣ್ ವಿಚಾರ ವೇದಿಕೆ ಸಹಯೋಗದಲ್ಲಿ ಈ ಪ್ರಶಸ್ತಿ ನೀಡಲಾಗುತ್ತಿದೆ. ಖ್ಞಜಿಅ್ಟ (ಮಾ.23) ಬೆಳಗ್ಗೆ 11ಕ್ಕೆ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ನಡೆಯುವ ಡಾ. ರಾಮ ಮನೋಹರ ಲೋಹಿಯಾ ಜನ್ಮದಿನಾಚರಣೆ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರ ಬಿ.ಆರ್. ಪಾಟೀಲ್, ಸಮಾಜವಾದಿ ಚಿಂತಕಿ ಡಾ. ವಿಜಯಾ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಭಾರತ ಯಾತ್ರಾ ಕೇಂದ್ರದ ಕೆ.ವಿ. ನಾಗರಾಜಮೂರ್ತಿ ತಿಳಿಸಿದ್ದಾರೆ.