ವೈದ್ಯರು ಸಂಶೋಧನೆಯಲ್ಲಿ ತೊಡಗಿಸಿಕೊಳ್ಳಲಿ

06 Jaggu 4
Published on

ವಿಜಯವಾಣಿ ಸುದ್ದಿಜಾಲ ಬೆಳಗಾವಿ

ಆರೋಗ್ಯಕರ ಸಮಾಜ ನಿರ್ಮಿಸುವಲ್ಲಿ ಹೋಮಿಯೋಪಥಿ ಚಿಕಿತ್ಸೆ ಪಾತ್ರ ಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ವೈದ್ಯರು ಶ್ರಮಿಸಬೇಕು ಎಂದು ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಡಾ.ರಿಯಾಜ್ ಪಾಷಾ ಹೇಳಿದರು.

ಇಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವ ವಿದ್ಯಾಲಯದ ಎಪಿಜೆ ಅಬ್ದುಲ್ ಕಲಾಂ ಸಭಾಂಗಣದಲ್ಲಿ ಭಾನುವಾರ ಭರತೇಶ ಹೋಮಿಯೋಪಥಿಕ್ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ವತಿಯಿಂದ ಹಮ್ಮಿಕೊಂಡಿರುವ ಏಕಲವ್ಯ ಎರಡು ದಿನಗಳ ರಾಷ್ಟ್ರೀಯ ಹೋಮಿಯೋಪಥಿಕ್ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

ಮಧುಮೇಹ ಬೆಳೆದಂತೆ ಕ್ಯಾನ್ಸರ್ ರೋಗವೂ ಹರಡುತ್ತಿದೆ. ಮಧಮೇಹ ಮತ್ತು ಕ್ಯಾನ್ಸರ್ ರೋಗಗಳ ಮೇಲೆ ಪರಿಣಾಮಕಾರಿ ಔಷಧಗಳನ್ನು ಕಂಡು ಹಿಡಿಯಬೇಕಾಗಿದೆ. ಈ ನಿಟ್ಟಿನಲ್ಲಿ ನಿರಂತರವಾಗಿ ಸಂಶೋಧನೆಗಳು ನಡೆಯಬೇಕು ಎಂದರು. ಯುವ ವೈದ್ಯರು ಹೆಚ್ಚಿನ ಸಂಶೋಧನೆ ಮತ್ತು ಪುರಾವೆ ಆಧಾರಿತ ಅಧ್ಯಯನ ನಡೆಸಬೇಕು ಎಂದರು.

ಗೌರವ ಅತಿಥಿಯಾಗಿ ನವದೆಹಲಿಯ ಹೋಮಿಯೋಪಥಿ ಕೇಂದ್ರೀಯ ಮಂಡಳಿ ಮಾಜಿ ಅಧ್ಯಕ್ಷ ಡಾ.ರಾಮಜೀಸಿಂಗ್ ಮಾತನಾಡಿ, ಸಮುದಾಯದ ಆರೋಗ್ಯ ರಕ್ಷಣೆ ಮತ್ತು ಸಾಂಕ್ರಾಮಿಕ ರೋಗಗಳನ್ನು ತಡೆಯುವಲ್ಲಿ ಹಾಗೂ ಜೀವನಶೈಲಿಯ ಅಸ್ವಸ್ಥತೆಗಳನ್ನು ಅಭಿವೃದ್ಧಿಶೀಲಗೊಳಿಸುವಲ್ಲಿ ಹೋಮಿಯೋಪಥಿ ವೈದ್ಯರ ಪಾತ್ರ ಮುಖ್ಯವಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಭರತೇಶ ಶೀಕ್ಷಣ ಸಂಸ್ಥೆಯ ಕಾರ್ಯದರ್ಶಿ ವಿನೋದ ದೊಡ್ಡಣ್ಣವರ ಮಾತನಾಡಿ, ಹೋಮಿಯೋಪಥಿ ಚಿಕಿತ್ಸಾ ಪದ್ಧತಿ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದೆ. ಸರ್ಕಾರ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕಾಗಿದೆ ಎಂದರು.

ಭರತೇಶ ಶೀಕ್ಷಣ ಸಂಸ್ಥೆಯ ಉಪಾಧ್ಯಕ್ಷ ಶ್ರೀಪಾಲ ಖೇಮಲಾಪುರೆ, ಖಜಾಂಚಿ ಭೂಷಣ ಮಿರ್ಜಿ, ಕರ್ನಾಟಕ ಹೋಮಿಯೋಪಥಿ ಮಹಾವಿದ್ಯಾಲಯಗಳ ಒಕ್ಕೂಟದ ಅಧ್ಯಕ್ಷ ಚಂದ್ರಶೇಖರ ಇತರರಿದ್ದರು.

ಸಮ್ಮೇಳನದಲ್ಲಿ 1,400 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಮುಂಬೈನ ಖ್ಯಾತ ಹೋಮಿಯೋಪಥಿ ತಜ್ಞ ಡಾ.ಪಾರೂಕ ಮಾಸ್ಟರ್, ಕೊಲ್ಕತ್ತಾ ಪಟ್ಟಣ್ಣದ ಡಾ.ಸಪ್ತರ್ಶಿ ಬ್ಯಾನರ್ಜಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಭುವನೇಶ್ವರಿ ಹಾಗೂ ಸಂಗಡಿಗರು ಪ್ರಾರ್ಥಿಸಿದರು. ಡಾ.ಸಾವಿತ್ರಿ ದೊಡ್ಡಣ್ಣವರ ಸ್ವಾಗತಿಸಿದರು. ಡಾ.ಪ್ರದೀಪಕುಮಾರ ಪಾಟೀಲ ಪ್ರಾಸ್ತಾವಿಕ ಮಾತನಾಡಿದರು. ಡಾ.ರಾಜಶ್ರೀ ಮಿಸಾಳೆ, ಡಾ.ಜ್ಯೋತಿ ದಾಬೋಳಕರ ಪರಿಚಿಯಿಸಿದರು. ಡಾ.ಮಿಲಿಂದ ಬೆಳಗಾಂವಕರ ನಿರೂಪಿಸಿದರು. ಡಾ.ಶ್ರೀಕಾಂತ ಕೊಂಕಣಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net