ಡಾ. ಸವಿತಾ ಕಾಮತ ಸೇವೆ ಶ್ಲಾಘನೀಯ

SAVITA KAMAT
Published on

ಭಟ್ಕಳ: ಖಾಸಗಿ ಆಸ್ಪತ್ರೆಗಳಲ್ಲಿ ಸಿಗುವ ಸೌಲಭ್ಯಕ್ಕಿಂತ ಹೆಚ್ಚಿನ ಸೌಲಭ್ಯ ಸರ್ಕಾರಿ ಆಸ್ಪತ್ರೆಯಲ್ಲಿ ನೀಡಿ ರಾಜ್ಯಕ್ಕೆ ಮಾದರಿ ಆಸ್ಪತ್ರೆಯನ್ನಾಗಿಸಿದ, ಮುಖ್ಯಮಂತ್ರಿ ಪದಕ ಪುರಸ್ಕೃತೆ ಡಾ. ಸವಿತಾ ಕಾಮತ ಅವರ ಸೇವೆ ಶ್ಲಾಘನೀಯ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ನೀರಜ್ ಹೇಳಿದರು.

ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಸಿಬ್ಬಂದಿ ವತಿಯಿಂದ ಶನಿವಾರ ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸರ್ಕಾರಿ ಆಸ್ಪತ್ರೆಯನ್ನು ಹೇಗೆ ಅಭಿವೃದ್ಧಿ ಪಡಿಸಬಹುದು ಎಂದು ಡಾ. ಸವಿತಾ ತೋರಿಸಿಕೊಟ್ಟಿದ್ದಾರೆ. ಇವರ ದಕ್ಷ ಸೇವೆ ಇತರ ವೈದ್ಯರಿಗೂ ಮಾದರಿಯಾಗಬೇಕು ಎಂದರು.

ಸನ್ಮಾನ ಸ್ವೀಕರಿಸಿದ ಡಾ. ಸವಿತಾ ಕಾಮತ ಮಾತನಾಡಿ, ಬಡ ಜನತೆಗೆ ನನ್ನ ಕೈಲಾದಷ್ಟು ಸೇವೆ ಮಾಡುತ್ತಿದ್ದೇನೆ. ಆಸ್ಪತ್ರೆಯ ಇತರ ವೈದ್ಯರು ಹಾಗೂ ಸಿಬ್ಬಂದಿ ಶ್ರಮದಿಂದ ನನಗೆ ಪ್ರಶಸ್ತಿ ದೊರೆತಿದ್ದು, ಈ ಪ್ರಶಸ್ತಿಯಿಂದ ಜವಾಬ್ದಾರಿಯೂ ಹೆಚ್ಚಾಗಿದೆ ಎಂದರು.

ಡಾ. ಲಕ್ಷ್ಮೀಶ ನಾಯ್ಕ, ಡಾ. ಬಾಲಚಂದ್ರ ಮೇಸ್ತ, ಡಾ. ಸುಲ್ತಾನಾ ಮಾತನಾಡಿದರು. ಜಿಲ್ಲಾ ಸಹಾಯಕ ಆಡಳಿತಾಧಿಕಾರಿ ಡಾ. ಸತೀಶ ಬಿ., ಇತರರಿದ್ದರು.

ಆಸ್ಪತ್ರೆಯ ಸಿಬ್ಬಂದಿ ವಿಶ್ವನಾಥ ಕಾರ್ಯಕ್ರಮ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net