

ಲಿಂಗಸುಗೂರು: ಕನ್ನಡ ಜಾಗೃತಿ ಸಮಿತಿ ಸದಸ್ಯರಾಗಿ ಯುವ ಸಂಶೋಧಕ, ಸಾಹಿತಿ ಡಾ.ಶಿವರಾಜ ಯತಗಲ್ ಅವರನ್ನು ನೇಮಕ ಮಾಡಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಆರ್. ರಮೇಶ ಆದೇಶ ಹೊರಡಿಸಿದ್ದಾರೆ.
ರಾಜ್ಯದ ಜಿಲ್ಲೆಗಳಲ್ಲಿ ಕನ್ನಡ ಅಭಿವೃದ್ಧಿ ಕಾರ್ಯಕ್ರಮಗಳ ಅನುಷ್ಠಾನ ಮತ್ತು ಭಾಷಾ ನೀತಿ ಕಾರ್ಯಕ್ರಮಗಳ ಅನುಷ್ಠಾನವು ಕನ್ನಡ ಜಾಗೃತಿ ಸಮಿತಿಯದ್ದಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಡಾ.ಶಿವರಾಜ ಯತಗಲ್ ರಾಯಚೂರು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಯನ ವಿಭಾಗದಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಲೇಖಕರಾಗಿ, ಸಂಶೋಧಕರಾಗಿ ಕೃತಿಗಳನ್ನು ಪ್ರಕಟಿಸಿದ್ದಾರೆ. ಅಂತಾರಾಷ್ಟ್ರೀಯ, ರಾಷ್ಟ್ರೀಯ, ರಾಜ್ಯಮಟ್ಟದ ವಿಚಾರ ಸಂಕಿರಣ, ಕಮ್ಮಟಗಳಲ್ಲಿ ಪ್ರಬಂಧಗಳನ್ನು ಮಂಡಿಸಿದ್ದಾರೆ.