ಡಾ. ಶಿವರಾಜಕುಮಾರ್ ನೋಡಲು ಮುಗಿಬಿದ್ದ ಯುವಕರು

26 Dwd 4
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಹ್ಯಾಟ್ರಿಕ್ ಹೀರೋ ಡಾ. ಶಿವರಾಜಕುಮಾರ್ ಅವರು ಮಂಗಳವಾರ ವಿದ್ಯಾಕಾಶಿ ಧಾರವಾಡಕ್ಕೆ ಆಗಮಿಸಿ ಮಾದಕ ವಸ್ತುಗಳನ್ನು ಬಳಕೆ ಮಾಡದಂತೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿದರು.

ಹುಬ್ಬಳ್ಳಿ- ಧಾರವಾಡ ನಗರ ಪೊಲೀಸ್ ಕಮೀಷನರೇಟ್ ವತಿಯಿಂದ ಇಲ್ಲಿನ ಜೆಎಸ್‌ಎಸ್ ಹಾಗೂ ಕರ್ನಾಟಕ ಕಾಲೇಜು ಮೈದಾನದಲ್ಲಿ ಮಾದಕ ವಸ್ತುಗಳನ್ನು ಬಳಕೆ ಮಾಡದಂತೆ ಜಾಗೃತಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಮೊದಲು ಜೆಎಸ್‌ಎಸ್ ಕಾಲೇಜಿಗೆ ಪತ್ನಿ ಗೀತಾ ಸಮೇತ ಶಿವರಾಜಕುಮಾರ್ ಆಗಮಿಸುತ್ತಿದ್ದಂತೆ ಸಾವಿರಾರು ವಿದ್ಯಾರ್ಥಿಗಳು ಕೇಕೆ, ಶಿಳ್ಳೆ ಹೊಡೆದು ಸಂಭ್ರಮಿಸಿದರು. ತಮ್ಮ ನೆಚ್ಚಿನ ನಟನ ಕೈಕುಲುಕಿ ಸಂತಸಪಟ್ಟರು. ಈ ವೇಳೆ ಶಿವರಾಜಕುಮಾರ್ ತಮ್ಮ ಸಿನೆಮಾಗಳ ಹಾಡುಗಳಿಗೆ ಡ್ಯಾನ್ಸ್ ಮಾಡಿದರು. ಕೆಲ ಡೈಲಾಗ್ ಹೇಳಿ ಯುವ ಸಮೂಹವನ್ನು ರಂಜಿಸಿದರು.

ವಿದ್ಯಾರ್ಥಿಗಳು ಜೀವನ ಕಟ್ಟಿಕೊಳ್ಳುವ ಸಂದರ್ಭದಲ್ಲಿ ಮಾದಕ ವಸ್ತುಗಳಿಗೆ ಬಲಿಯಾಗಬಾರದು. ಈ ಬಗ್ಗೆ ಮಾಹಿತಿ ಇದ್ದರೆ ಪೊಲೀಸರಿಗೆ ತಿಳಿಸಬೇಕು ಎಂದು ಕಿವಿಮಾತು ಹೇಳಿದರು.

ನಂತರ ಕೆಸಿಡಿ ಮೈದಾನಕ್ಕೆ ತೆರಳಿ ಮಾದಕ ವಸ್ತು ಬಳಸದಂತೆ ಮನವಿ ಮಾಡಿದರು. ಪೊಲೀಸ್ ಆಯುಕ್ತ ಎನ್. ಶಶಿಕುಮಾರ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net