ಡಾ. ಶಿವಸ್ವಾಮಿಗೆ ಕನ್ನಡ ಪರಿಚಾರಕ ಪ್ರಶಸ್ತಿ

Vijayavani-logo
Published on

ಬೆಂಗಳೂರು: ಕವಿ ಹಾಗೂ ಕನ್ನಡ ಹೋರಾಟಗಾರ ದಿವಂಗತ ಡಾ. ಕೋ.ವೆಂ. ರಾಮಕೃಷ್ಣೇಗೌಡ ಅವರ ನೆನಪಿನಲ್ಲಿ ಕನ್ನಡ ಸಂಘರ್ಷ ಸಮಿತಿಯು ಕೊಡಮಾಡುವ ಡಾ. ಕೋ.ವೆಂ. ರಾ. ಕನ್ನಡ ಪರಿಚಾರಕ ಪ್ರಶಸ್ತಿಗೆ ಕನ್ನಡ ಕಾರ್ಯಕರ್ತ ಡಾ. ಶಿವಸ್ವಾಮಿ ಎನ್ ಅವರನ್ನು ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಯು 5 ಸಾವಿರ ರೂ. ನಗದು, ಫಲಕ ಹಾಗೂ ಅಭಿನಂದನಾ ಪತ್ರವನ್ನು ಒಳಗೊಂಡಿದೆ. ಈ ತಿಂಗಳ 6ರಂದು ನಗರದ ನರಸಿಂಹರಾಜ ಕಾಲೋನಿಯ ಬಿಎಂಶ್ರೀ ಕಲಾಭವನದಲ್ಲಿ ನಿಗದಿಯಾಗಿರುವ ಡಾ. ಕೋ.ವೆಂ.ರಾಮಕೃಷ್ಣೇಗೌಡ ಜನ್ಮದಿನ ಕಾರ್ಯಕ್ರಮದಲ್ಲಿ ಪುರಸ್ಕೃತರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಮಿತಿಯ ಅಧ್ಯಕ್ಷ ಎ.ಎಸ್.ನಾಗರಾಜಸ್ವಾಮಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net