ಡಾ.ಶುಶ್ರೂತ್‌ಗೌಡ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ

Shrushurth Gowda
Published on

ಮೈಸೂರು: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಪ್ರಧಾನ ಕಾರ್ಯದರ್ಶಿಯನ್ನಾಗಿ ನಗರದ ವೈದ್ಯ ಡಾ.ಶುಶ್ರೂತ್‌ಗೌಡ ಅವರನ್ನು ನೇಮಕ ಮಾಡುವ ಮೂಲಕ ಅವರಿಗೆ ಮಹತ್ವದ ಜವಾಬ್ದಾರಿ ನೀಡಲಾಗಿದೆ.
ಗೋಪಾಲಗೌಡ ಶಾಂತವೇರಿ ಆಸ್ಪತ್ರೆಯಲ್ಲಿ ನರರೋಗ ಕೇಂದ್ರವನ್ನು ಮುನ್ನಡೆಸುತ್ತಿರುವ ಡಾ.ಶುಶ್ರೂತ್‌ಗೌಡ ಅವರು ಡಾ.ಎಚ್.ಸಿ.ವಿಷ್ಣುಮೂರ್ತಿ ಹಾಗೂ ಕೆ.ಜಿ.ರೇಖಾಮೂರ್ತಿ ದಂಪತಿ ಪುತ್ರ. ಎಂ.ಬಿ.ಪಾಟೀಲ್ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ವ್ಯಾಸಂಗ ಮುಗಿಸಿ ಚೆನ್ನೈನಲ್ಲಿರುವ ಸ್ಟ್ಯಾನ್ಲಿ ಮೆಡಿಕಲ್ ಕಾಲೇಜು ಮತ್ತು ಅಮೆರಿಕದ ಯೂನಿವರ್ಸಿಟಿ ಆಫ್ ಫ್ಲೋರಿಡಾದಲ್ಲಿ ನರರೋಗದ ಬಗ್ಗೆ ಅತ್ಯುನ್ನತ ವಿದ್ಯಾಭ್ಯಾಸವನ್ನು ಪಡೆದಿದ್ದಾರೆ.
ಅಮೆರಿಕದ ವಿವಿಧ ವಿಶ್ವವಿದ್ಯಾಲಯದಲ್ಲಿ ಕಾರ್ಯ ನಿರ್ವಹಿಸಿದರೂ ವಾಪಸ್ ತವರಿಗೆ ಬಂದು ಆರೋಗ್ಯ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಟೆಲಿ ಮೆಡಿಸನ್ ಚಿಕಿತ್ಸೆ ಮೂಲಕ ಗ್ರಾಮೀಣ ಪ್ರದೇಶ, ಹಾಡಿ ಜನರಿಗೆ ಉಚಿತ ಆರೋಗ್ಯ ಶಿಬಿರಗಳನ್ನು ನಡೆಸುವ ಮೂಲಕ ಸೇವೆ ಮಾಡುತ್ತಿದ್ದಾರೆ. ಭಾರತ್ ಜೋಡೋ ಯಾತ್ರೆಯಲ್ಲಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ರಾಹುಲ್‌ಗಾಂಧಿ ಜತೆಗೆ ಸಂಪೂರ್ಣವಾಗಿ ಪಾಲ್ಗೊಂಡಿದ್ದರು.:

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net