ಮೈಸೂರಿನಲ್ಲಿ ಡಾ.ಶ್ರೀಬಾಲಗಂಗಾಧರನಾಥ ಸ್ವಾಮೀಜಿ ಪುಣ್ಯಸ್ಮರಣೆ, ಗಣ್ಯರಿಗೆ ಅಭಿನಂದನೆ

Published on

ಮೈಸೂರು: ಒಕ್ಕಲಿಗ ಯುವ ಬ್ರಿಗೇಡ್‌ನಿಂದ ನ.9ರಂದು ಡಾ.ಶ್ರೀಬಾಲಗಂಗಾಧರನಾಥ ಸ್ವಾಮೀಜಿ ಪುಣ್ಯಸ್ಮರಣೆ ಹಾಗೂ ರಾಷ್ಟ್ರಕವಿ ಕುವೆಂಪು ಜಯಂತ್ಯುತ್ಸವ, ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿದೆ.

ಮಾನಸಗಂಗೋತ್ರಿಯ ನಾಲ್ವಡಿಕೃಷ್ಣರಾಜ ಸಭಾಂಗಣ(ಸೆನೆಟ್ ಭವನ)ದಲ್ಲಿ ಅಂದು ಸಂಜೆ 5.30ಕ್ಕೆ ಆಯೋಜಿಸಿರುವ ಕಾರ್ಯಕ್ರಮವನ್ನು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಉದ್ಘಾಟಿಸಲಿದ್ದಾರೆ. ಆದಿಚುಂಚನಗಿರಿ ಪೀಠಾಧ್ಯಕ್ಷ ಡಾ.ಶ್ರೀನಿರ್ಮಲಾನಂದನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ಅಧ್ಯಕ್ಷತೆ ವಹಿಸುವರು.

ಕಾರ್ಯಕ್ರಮದಲ್ಲಿ ಅಧಿಕಾರಿಗಳಾದ ಡಾ.ನಾಗಾರ್ಜುನ್ ಬಿ.ಗೌಡ, ಪಿ.ವಿ.ಭೈರಪ್ಪ, ಎನ್.ಭವ್ಯಶ್ರೀ ಅವರನ್ನು ಸನ್ಮಾನಿಸಲಾಗುವುದು. ಸಚಿವರು, ಶಾಸಕರು, ಸಂಸದರು, ವಿವಿಧ ಅಧಿಕಾರಿಗಳು, ಪತ್ರಕರ್ತರು ಭಾಗವಹಿಸಲಿದ್ದಾರೆ ಎಂದು ಬ್ರಿಗೇಡ್ ಸಂಸ್ಥಾಪಕ ಅಧ್ಯಕ್ಷ ನಂಜೇಗೌಡ ನಂಜುಂಡ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net