

ಮಂಗಳೂರು: ದೇಶದ ಪ್ರತಿಷ್ಠಿತ ಶಿಕ್ಷಣ ಹಾಗೂ ಸಂಶೋಧನಾ ಸಂಸ್ಥೆ ಸುರತ್ಕಲ್‌ನಲ್ಲಿರುವ ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (ಎನ್ ಐಟಿಕೆ)ದ ಉಪ ನಿರ್ದೇಶಕರಾಗಿ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕ ಡಾ.ಸುಭಾಷ್ ಸಿ.ಯರಗಲ್ ಆ.1ರಂದು ಅಧಿಕಾರ ಸ್ವೀಕರಿಸಿದರು. 1996 ರಲ್ಲಿ ಎನ್‌ಐಟಿಕೆ ಸುರತ್ಕಲ್‌ಗೆ ಸೇರಿದ ಡಾ.ಯರಗಲ್ ಅವರು ಸಂಸ್ಥೆಯ ಬೆಳವಣಿಗೆ ಮತ್ತು ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರು ಆಡಳಿತ ಮಂಡಳಿಯ ಸದಸ್ಯ, ಡೀನ್ (ಯೋಜನೆ ಮತ್ತು ಅಭಿವೃದ್ಧಿ) ಮತ್ತು ಸಿವಿಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಸೇರಿದಂತೆ ಹಲವಾರು ಪ್ರಮುಖ ಆಡಳಿತಾತ್ಮಕ ಹುದ್ದೆಗಳನ್ನು ನಿರ್ವಹಿಸಿದ್ದಾರೆ.