ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಉತ್ತಮ ಮೌಲ್ಯ ತುಂಬಲಿ

31manju7
Published on

ಬೆಳಗಾವಿ: ವಿದ್ಯಾರ್ಥಿಗಳಲ್ಲಿ ದೇಶಪ್ರೇಮ, ಸಮಾಜ ಸೇವೆ, ಕರುಣೆ, ಮಮಕಾರ, ಸಹಿಷ್ಣುತೆಯಂತಹ ಸಮಾಜಮುಖಿ ಮೌಲ್ಯ ಬೆಳೆಸುತ್ತ ಅವರನ್ನು ಸಮಾಜದ ಜವಾಬ್ದಾರಿಯುತ ನಾಗರಿಕರನ್ನಾಗಿ ರೂಪಿಸುವವರೇ ನಿಜವಾದ ಶಿಕ್ಷಕರು ಎಂದು ಗದುಗಿನ ಜಗದ್ಗುರು ತೋಂಟದಾರ್ಯ ಸಂಸ್ಥಾನ ಮಠದ ಡಾ.ತೋಂಟದ ಸಿದ್ಧರಾಮ ಸ್ವಾಮೀಜಿ ಅಭಿಪ್ರಾಯಪಟ್ಟರು.

ಇಲ್ಲಿನ ಶಿವಬಸವ ನಗರದ ಶಿವಕುಮಾರ ಸಂಬರಗಿಮಠ ಸಭಾಭವನದಲ್ಲಿ ಸಿದ್ಧರಾಮೇಶ್ವರ ಪದವಿಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಸಿದ್ದರಾಮ ರೆಡ್ಡಿ ಅವರ ಸೇವಾ ನಿವೃತ್ತಿ ಹಿನ್ನೆಲೆಯಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿರು. ಸನ್ಮಾನ ಸ್ವೀಕರಿಸಿ ಪ್ರಾಚಾರ್ಯ ಸಿದ್ಧರಾಮ ರೆಡ್ಡಿ ಮಾತನಾಡಿದರು. ನಾಗನೂರು ರುದ್ರಾಕ್ಷಿ ಮಠದ ಡಾ.ಅಲ್ಲಮಪ್ರಭು ಸ್ವಾಮೀಜಿ ನೇತೃತ್ವ, ಕಾರ್ಯದರ್ಶಿ ಎಸ್.ಪಿ.ಹಿರೇಮಠ ಅಧ್ಯಕ್ಷತೆ ವಹಿಸಿದ್ದರು. ಪ್ರಾಧ್ಯಾಪಕ ಎ.ಕೆ.ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಶ್ವಿನಿ ಪಡೆಣ್ಣವರ ನಿರೂಪಿಸಿದರು. ಶಕುಂತಲಾ ಪಾಟೀಲ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net