ಡಾ. ವೀರೇಂದ್ರ ಹೆಗ್ಗಡೆ ಜನ್ಮದಿನಾಚರಣೆ

Veerendra heggade
Published on

ಹುಬ್ಬಳ್ಳಿ : ಇಲ್ಲಿನ ಹೆಗ್ಗೇರಿಯ ಜೆಎಸ್​ಎಸ್ ಶ್ರೀ ಮಂಜುನಾಥೇಶ್ವರ ಪದವಿಪೂರ್ವ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯದಲ್ಲಿ ಜನತಾ ಶಿಕ್ಷಣ ಸಮಿತಿಯ ಕಾರ್ಯಾಧ್ಯಕ್ಷ ಡಾ. ವೀರೇಂದ್ರ ಹೆಗ್ಗಡೆ ಅವರ 77ನೇ ಜನ್ಮದಿನದ ನಿಮಿತ್ತ ಶನಿವಾರ ವಿವಿಧ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಡಾ. ವೀರೇಂದ್ರ ಹೆಗ್ಗಡೆ ಅವರ ಕುರಿತು ನಿಬಂಧ ಸ್ಪರ್ಧೆ, ಚಿತ್ರಕಲೆ, ಭಾಷಣ ಸ್ಪರ್ಧೆ, ಸುವಿಚಾರ ಚಿಂತನ, ರಂಗೋಲಿ ಸ್ಪರ್ಧೆ, ಸ್ವರಚಿತ ಕವನ ವಾಚನ ಆಯೋಜಿಸಲಾಗಿತ್ತು.

ಪ್ರಭಾರಿ ಪ್ರಾಚಾರ್ಯ ಪ್ರೊ. ಸಾಜಿದ್ ಹುಸೇನ್ ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಅಂಗವಿಕಲ ಮಕ್ಕಳ ವಸತಿ ನಿಲಯಕ್ಕೆ ಭೇಟಿ ನೀಡಿ, ಸಿಹಿ ವಿತರಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net