ಡಾ.ವೀರೇಂದ್ರ ಹೆಗ್ಗಡೆ ಕಾರ್ಯ ಮಾದರಿ

10Huk1
Published on

ಹುಕ್ಕೇರಿ: ಬಡವರ ಆರ್ಥಿಕ ಅಭಿವೃದ್ಧಿಗೆ ಶ್ರಮಿಸುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಸಂಘದ ಕಾರ್ಯ ಶ್ಲಾಘನೀಯ. ಸಂಘವನ್ನು ಮುನ್ನಡೆಸುತ್ತಿರುವ ಡಾ.ವೀರೇಂದ್ರ ಹೆಗ್ಗಡೆ ಅವರು ಎಲ್ಲರಿಗೂ ಮಾದರಿ ಎಂದು ವಿದ್ಯುತ್ ಸಹಕಾರ ಸಂಘದ ನಿರ್ದೇಶಕ ಪೃಥ್ವಿ ಕತ್ತಿ ಹೇಳಿದರು.

ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿ ಗುರುವಾರ ಅರಣ್ಯ ಸಿದ್ಧೇಶ್ವರ ದೇವಸ್ಥಾನ ಸಭಾಮಂಟಪ ಮತ್ತು ವಿವಿಧ ಕಾಮಗಾರಿಗಳಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ೧,೫೦,೦೦೦ ರೂ. ಮಂಜೂರಾತಿ ಪತ್ರ ವಿತರಿಸಿ ಮಾತನಾಡಿದರು.

ದೇವಸ್ಥಾನ ಸಮಿತಿ ಕಾರ್ಯದರ್ಶಿ ರಮೇಶ ಬಾಗೇವಾಡಿ, ಮನೋಹರ ಕರಿಗಾರ, ಒಕ್ಕೂಟದ ಪದಾಧಿಕಾರಿಗಳು, ಸೇವಾ ಪ್ರತಿನಿಧಿಗಳು ಇದ್ದರು. ವಿದ್ಯಾ ಮಾಡಲಗಿ ಸ್ವಾಗತಿಸಿದರು. ಫಕ್ಕೀರೇಶ ಜಂಗಳಿ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net