

ಮಂಡ್ಯ: ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಮುಂದಿನ ಐದು ವರ್ಷದ ಆಡಳಿತ ಮಂಡಳಿ ಚುನಾವಣೆಗೆ ಸಂಬಂಧಿಸಿದಂತೆ ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದೆ.
ಒಕ್ಕೂಟದ ಎಲ್ಲ ತಾಲೂಕು ಉಪ ಕಛೇರಿಗಳಲ್ಲಿ ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದೆ. ಈ ಸಂಬಂಧ ಯಾವುದೇ ಆಕ್ಷೇಪಣೆಗಳನ್ನು ಸಲ್ಲಿಸುವುದಿದ್ದಲ್ಲಿ(ಸಾರ್ವಜನಿಕ ರಜೆ ದಿನ ಹೊರತುಪಡಿಸಿ) 30 ದಿನದೊಳಗೆ ಗೆಜ್ಜಲಗೆರೆಯಲ್ಲಿರುವ ಕಚೇರಿಗೆ ಸಲ್ಲಿಸಬಹುದು ಎಂದು ಜಿಲ್ಲಾ ಫೆಡರಲ್ ಸಹಕಾರ ಸಂಘಗಳ ಚುನಾವಣಾಧಿಕಾರಿ ಡಾ.ಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.