ರಾಷ್ಟ್ರೀಯ ಡ್ರ್ಯಾಗನ್ ಬೋಟ್ ಚಾಂಪಿಯಶಿಪ್‌ಗೆ ಚಾಲನೆ

udp-23-dragon boat
Published on

ಉಡುಪಿ: ಜನರಲ್ ತಿಮ್ಮಯ್ಯ ಅಕಾಡೆಮಿ ಸಹಯೋಗದಲ್ಲಿ ಪಡುಕೆರೆಯಲ್ಲಿ ಜಲಕ್ರೀಡೆ ತರಬೇತಿ ಕೇಂದ್ರ ಸ್ಥಾಪಿಸುವ ಉದ್ದೇಶವಿದ್ದು, ಕಯಾಕಿಂಗ್ ಅಸೋಸಿಯೇಶನ್ ಸಹಕಾರವೂ ಅಗತ್ಯ ಎಂದು ಶಾಸಕ ಕೆ.ರಘುಪತಿ ಭಟ್ ಹೇಳಿದರು.

ಉಪ್ಪೂರಿನ ಮಡಿಸಾಲು ನದಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಭಾರತೀಯ ಕಯಾಕಿಂಗ್ ಮತ್ತು ಕನೂಯಿಂಗ್ ಅಸೋಸಿಯೇಷನ್ ಸಹಯೋಗದೊಂದಿಗೆ ಫೆಬ್ರವರಿ 23 ರಿಂದ 26ರ ವರೆಗೆ ಆಯೋಜಿಸಿದ 11ನೇ ರಾಷ್ಟ್ರೀಯ ಮಟ್ಟದ ಡ್ರ್ಯಾಗನ್ ಬೋಟ್ ಚಾಂಪಿಯನ್‌ಶಿಪ್‌ಗೆ ಗುರುವಾರ ಚಾಲನೆ ನೀಡಿ ಅವರು ಮಾತನಾಡಿದರು.

ಕರಾವಳಿಯಲ್ಲಿ ಯುವಕರಿಗೆ ದೋಣಿ ನಡೆಸುವ ಕಲೆ ವಂಶಪಾರಂಪರ‌್ಯವಾಗಿ ಬಂದಿರುತ್ತದೆ. ಈ ಸ್ಪರ್ದೆ ಒಲಂಪಿಕ್ಸ್‌ನಲ್ಲೂ ಸೇರ್ಪಡೆಗೊಂಡಿರುವುದರಿಂದ ಇಲ್ಲಿನ ಯುವಕರಿಗೆ ಸ್ವಲ್ಪ ತರಬೇತಿ ನೀಡಿದರೆ ಈ ಕ್ಷೇತ್ರದಲ್ಲಿ ಮಹತ್ವದ ಸಾಧನೆ ಮಾಡಲು ಸಾಧ್ಯವಿದೆ. ಹೀಗಾಗಿ ಈ ಬಾರಿ ಸ್ಥಳೀಯರಿಗೆ ಡ್ರಾೃಗನ್ ಬೋಟ್ ಪರಿಚಯಿಸುವ ನಿಟ್ಟಿನಲ್ಲಿ ಸ್ಪರ್ಧೆ ಆಯೋಜಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಮಾಹೆ ಮಣಿಪಾಲದ ಸಹ ಕುಲಾಧಿಪತಿ ಡಾ.ಎಚ್. ಎಸ್.ಬಲ್ಲಾಳ್, ಭಾರತೀಯ ಕಯಾಕಿಂಗ್ ಕನೂಯಿಂಗ್ ಅಸೋಸಿಯೇಷನ್ ಅಧ್ಯಕ್ಷ ಪ್ರಶಾಂತ್ ಕುಶ್ವಾಹಾ, ಕಯಾಕಿಂಗ್ ಕನೂಯಿಂಗ್ ಅಸೋಸಿಯೇಷನ್ ಆಫ್ ಕರ್ನಾಟಕದ ಅಧ್ಯಕ್ಷ ಮೇಜರ್ ಜನರಲ್ ಎಂ.ಎನ್. ದೇವಯ್ಯ, ಕಾರ್ಯದರ್ಶಿ ಕ್ಯಾಪ್ಟನ್ ದಿಲೀಪ್ ಕುಮಾರ್, ಭಾರತೀಯ ಡ್ರ್ಯಾಗನ್ ಬೋಟ್ ತಂಡದ ನಾಯಕರಾದ ಮಂಜೀತ್ ಸಿಂಗ್, ನಗರ ಸಭೆಯ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಉಪ್ಪೂರು ಗ್ರಾಪಂ ಅಧ್ಯಕ್ಷ ಮಹೇಶ್ ಕೋಟ್ಯಾನ್, ಚಾಂತಾರು ಗ್ರಾಪಂ ಅಧ್ಯಕ್ಷೆ ಬೇಬಿ, ಹಾರಾಡಿಗ್ರಾಪಂ ಅಧ್ಯಕ್ಷ ಪ್ರಭಾಕರ್ ಶೆಟ್ಟಿ, ಡ್ರ್ಯಾಗನ್ ಬೋಟ್ ಪಂದ್ಯಾವಳಿ ಸ್ವಾಗತ ಸಮಿತಿ ಅಧ್ಯಕ್ಷ ಬಿರ್ತಿ ರಾಜೇಶ್ ಶೆಟ್ಟಿ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್., ಎಸ್‌ಪಿ ಅಕ್ಷಯ್ ಮಚ್ಚಿಂದ್ರ ಹಾಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೋಷನ್ ಶೆಟ್ಟಿ ಉಪಸ್ಥಿತರಿದ್ದರು. .

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net