ಚರಂಡಿ ತ್ಯಾಜ್ಯ ತೆರವುಗೊಳಿಸಿ

JUL 14-HRP-01
ಅರಸೀಕೆರೆ ಗ್ರಾಮದಲ್ಲಿ ಪೊಲೀಸ್ ವಸತಿ ಗೃಹ ನಿವಾಸಿಗಳು ಶನಿವಾರ ಪ್ರತಿಭಟನೆ ನಡೆಸಿದರು. ಪ್ರಮುಖರಾದ ರಾಜಪ್ಪ, ಹಾಲಪ್ಪ, ಸಿದ್ದೇಶ್, ಗುರುಶಾಂತ ಇತರರಿದ್ದರು.
Published on

ಹರಪನಹಳ್ಳಿ: ತಾಲೂಕಿನ ಅರಸೀಕೆರೆ ಗ್ರಾಮದಲ್ಲಿ ಚರಂಡಿ ಸ್ವಚ್ಛಗೊಳಿಸುವಂತೆ ಪೊಲೀಸ್ ವಸತಿ ಗೃಹ ನಿವಾಸಿಗಳು ಶನಿವಾರ ಪ್ರತಿಭಟನೆ ನಡೆಸಿದರು.

ಗ್ರಾಮದ ಹೃದಯ ಭಾಗದಲ್ಲಿ ರಾಜ್ಯ ಹೆದ್ದಾರಿ 47ರ ವಿಸ್ತರಣೆ ಕಾಮಗಾರಿ ಆರಂಭವಾಗಿ ಎರಡು ವರ್ಷವಾದರೂ ಪೂರ್ಣಗೊಂಡಿಲ್ಲ. ಇದರಿಂದ ಚರಂಡಿಗಳಲ್ಲಿ ತ್ಯಾಜ್ಯ ಸಂಗ್ರಹವಾಗಿದೆ. ಸಾಂಕ್ರಾಮಿಕ ರೋಗದ ಭೀತಿ ಸ್ಥಳೀಯ ಕಾಡುತ್ತಿದೆ.

ರಾಜ್ಯದಲ್ಲಿ ಮಲೇರಿಯಾ ವ್ಯಾಪಕವಾಗಿ ಹರಡುತ್ತಿದ್ದು, ಭಯ ಆವರಿಸಿದೆ. ವಸತಿ ಗೃಹ ಬಳಿ ಚರಂಡಿ ತುಂಬಿರುವುದರಿಂದ ಸೊಳ್ಳೆಗಳ ಉಗಮ ಸ್ಥಾನವಾಗಿದೆ. ಕೂಡಲೇ ತ್ಯಾಜ್ಯ ತೆರವುಗೊಳಿಸಬೇಕು ಎಂದು ಒತ್ತಾಯಿಸಿದರು.

ಗ್ರಾಮದ ರಸ್ತೆ ಎರಡೂ ಬದಿಯಲ್ಲಿ ಚರಂಡಿ ಕಾಮಗಾರಿ ಅಪೂರ್ಣಗೊಂಡಿದೆ. ಗ್ರಾಮದ ಮೇಲ್ಭಾಗದಿಂದ ಹರಿಯುವ ನೀರು ಪೊಲೀಸ್ ವಸತಿ ಗೃಹದ ಬಳಿ ಬಸ್ ನಿಲ್ದಾಣ ಇರುವುದರಿಂದ ನಿತ್ಯ ಸಾವಿರಾರು ಜನರು ಮೂಗು ಮುಚ್ಚಿಕೊಂಡು ಓಡಾಡುತ್ತಿದ್ದಾರೆ. ಅಧಿಕಾರಿಗಳು ಕಾಮಗಾರಿ ಪೂರ್ಣಗೊಳಿಸಿ ಉತ್ತಮ ಚರಂಡಿ ಕಾಮಗಾರಿ ಪೂರ್ಣಗೊಳಿಸಬೇಕೆಂದು ನಿವಾಸಿಗದ ರಾಜಪ್ಪ, ಹಾಲಪ್ಪ, ಸಿದ್ದೇಶ್, ಗುರುಶಾಂತ ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net