

ಹೊಳೆನರಸೀಪುರ: ಗ್ರಾಮೀಣ ಪ್ರದೇಶಗಳಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳು ಯಶ ಕಾಣಲು ಗ್ರಾಮದವರ ಪರಿಶ್ರಮ ಮತ್ತು ಅಸಕ್ತಿ ಸಹಕಾರಿ ಎಂದು ಕಾಂಗ್ರೆಸ್ ಮುಖಂಡ ಶ್ರೇಯಸ್ ಪಟೇಲ್ ನುಡಿದರು.
ಮುಕುಂದೂರು ಹೊಸಳ್ಳಿ ಗ್ರಾಮದಲ್ಲಿ ಯುವ ಸೇನೆ ಶುಕ್ರವಾರ ಆಯೋಜಿಸಿದ್ದ ಶನಿಪ್ರಭಾವ ಪೌರಾಣಿಕ ನಾಟಕಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಮುಂಬರುವ ದಿನಗಳಲ್ಲಿ ಸರ್ಕಾರ ಮತ್ತಷ್ಟು ಅಭಿವೃದ್ದಿ ಕೆಲಸಗಳನ್ನು ಮಾಡಲು ಜನರ ಬೆಂಬಲ ಬೇಕು ಎಂದರು. ಹನುಮನಹಳ್ಳಿ ಕಾಂಗ್ರೆಸ್ ಮುಖಂಡ ದೇವರಾಜ್, ರವಿ, ನಟರಾಜ್, ಪುಟ್ಟರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಟಿ. ಲಕ್ಷ್ಮಣ್ ಮತ್ತು ಮುಖಂಡರು ಹಾಜರಿದ್ದರು.