ಮಂಗಳವಾರ ಉಚಿತ ನಾಟಕ ಪ್ರದರ್ಶನ

drama
Published on

ಕುಶಾಲನಗರ:

ಕೊಡಗು ಜಿಲ್ಲಾ ಛಾಯಾಚಿತ್ರಗ್ರಾಹಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ಮಂಗಳವಾರ ಸಂಜೆ (ಫೆ.18) ಕುಶಾಲನಗರದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಶ್ರೀಕೃಷ್ಣ ಸಂಧಾನ ಎಂಬ ನಾಟಕ ಪ್ರದರ್ಶನ ಉಚಿತವಾಗಿ ಏರ್ಪಡಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಆವರ್ತಿ ಮಹದೇವಪ್ಪ ತಿಳಿಸಿದ್ದಾರೆ. ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ಸಿರಿಗೆರೆ ಗ್ರಾಮದ ಧಾತ್ರಿ ರಂಗಸAಸ್ಥೆ ಕಲಾವಿದರಿಂದ ಈ ನಗೆ ನಾಟಕ ಪ್ರದರ್ಶನ ನಡೆಯಲಿದೆ. ಸಂಜೆ 6 ರಿಂದ 8.30 ರ ತನಕ ನಾಟಕ ಪ್ರದರ್ಶನ ಏರ್ಪಡಿಸಲಾಗಿದೆ. ಎಲ್ಲರಿಗೂ ಉಚಿತ ಪ್ರವೇಶವಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.

ನಾಟಕ ಸಂಪೂರ್ಣ ಹಾಸ್ಯಮಯವಾಗಿದ್ದು ಈ ನಾಟಕ ನೋಡಿ ನಗದಿದ್ದವರಿಗೆ ಸ್ಥಳದಲ್ಲೇ ನಗದು ಬಹುಮಾನ ನೀಡಲಾಗುವುದು. ಸಮಾಜ ಸೇವಕ ರಾಜೇಗೌಡ ನಾಟಕ ಪ್ರದರ್ಶನ ಉದ್ಘಾಟಿಸಲಿದ್ದಾರೆ. ಕೊಡಗು ಜಿಲ್ಲಾ ಛಾಯಾಚಿತ್ರ ಗ್ರಾಹಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಆವರ್ತಿ ಆರ್.ಮಹದೇವಪ್ಪ ಅಧ್ಯಕ್ಷತೆ ವಹಿಸಲಿದ್ದು, ಗಾಯತ್ರಿಕಲ್ಯಾಣ ಮಂಟಪ ಮಾಲಿಕರಾದ ಕೆ.ಬಿ. ಗಾಯತ್ರಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳಲಿದ್ದಾರೆ ಎಂದು ತಿಳಿಸಿದರು.

ಸಂಘದ ಮಾಜಿ ಜಿಲ್ಲಾಧ್ಯಕ್ಷ ಗುಡ್ಡೆಮನೆ ವಿಶ್ವಕುಮಾರ್, ಜಿಲ್ಲಾ ಸಾಂಸ್ಕೃತಿಕ ಕಾರ್ಯದರ್ಶಿ ಡೇವಿಡ್ ಸೋಲೋಮನ್, ಸಂಘದ ಕುಶಾಲನಗರ ತಾಲೂಕು ಅಧ್ಯಕ್ಷ ವಿಜಯ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net