

ವಿಜಯವಾಣಿ ಸುದ್ದಿಜಾಲ ಧಾರವಾಡ
ಆಧುನಿಕ ಕನ್ನಡ ರಂಗಭೂಮಿ ದಿನದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ರಂಗಾಯಣ ಹಾಗೂ ನಗರದ ಸಕ್ಕರಿ ಬಾಳಾಚಾರ್ (ಶಾಂತಕವಿ) ಟ್ರಸ್ಟ್ ಸಹಯೋಗದಲ್ಲಿ ನ. 14ರಿಂದ 16ರವರೆಗೆ ಪ್ರತಿದಿನ ಸಂಜೆ 6.30ಕ್ಕೆ ರಂಗಾಯಣ ಸಭಾಭವನದಲ್ಲಿ ನಾಟಕೋತ್ಸವ ಆಯೋಜಿಸಲಾಗಿದೆ ಎಂದು ರಂಗಾಯಣ ನಿರ್ದೇಶಕ ಡಾ. ರಾಜು ತಾಳಿಕೋಟಿ ಹೇಳಿದರು.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ. 14ರಂದು ಸಂಜೆ 5.30ಕ್ಕೆ ಸಕ್ಕರಿ ಬಾಳಾಚಾರ್ ಟ್ರಸ್ಟ್ ಅಧ್ಯಕ್ಷ ಬಾಬುರಾವ್ ಸಕ್ಕರಿ ನಾಟಕೋತ್ಸವಕ್ಕೆ ಚಾಲನೆ ನೀಡುವರು. ಉಪನ್ಯಾಸಕ ಡಾ. ಗುರುನಾಥ ಬಡಿಗೇರ `ಶಾಂತಕವಿಗಳ ಬದುಕು ಬರಹ' ಕುರಿತು ಉಪನ್ಯಾಸ ನೀಡುವರು. ನಾಟಕ ಅಕಾಡೆಮಿ ಸದಸ್ಯೆ ಗಾಯತ್ರಿ ಹಡಪದ, ರಂಗ ಸಮಾಜದ ಸದಸ್ಯ ಮಹಾಂತೇಶ ಗಜೇಂದ್ರಗಡ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದರು.
14ರAದು ಸಂಜೆ 6.30ಕ್ಕೆ ಡಾ. ಪ್ರಕಾಶ ಗರುಡ ನಿರ್ದೇಶನದ `ವಿಶ್ವಾಮಿತ್ರ ಮೇನಕೆ ಡಾನ್ಸ್ ಮಾಡೋದು ಏನಕೆ?' ನಾಟಕ ಪ್ರದರ್ಶನಗೊಳ್ಳಲಿದೆ. 15ರಂದು ಅಕ್ಷರ ಕೆ.ವಿ. ನಿರ್ದೇಶನದ `ಮಾಲತಿ ಮಾಧವ' ನಾಟಕ, 16ರಂದು ವಿದ್ಯಾನಿಽ ವನಾರಸೆ ನಿರ್ದೇಶನದ `ಅಂಕದ ಪರದೆ' ನಾಟಕ ಪ್ರದರ್ಶನಗೊಳ್ಳಲಿದೆ.
ರಂಗಾಯಣ ಆಡಳಿತಾಽಕಾರಿ ಶಶಿಕಲಾ ಹುಡೇದ, ರಂಗನಿರ್ದೇಶಕ ಡಾ. ಪ್ರಕಾಶ ಗರುಡ ಸುದ್ದಿಗೋಷ್ಠಿಯಲ್ಲಿದ್ದರು.