

ಮಂಡ್ಯ: ನೆಲದನಿ ಬಳಗದ ವತಿಯಿಂದ ಕೆ.ಪಿ.ಪೂರ್ಣಚಂದ್ರ ತೇಜಸ್ವಿಯವರ ಅಣ್ಣನ ನೆನಪು ಸಾಕ್ಷ್ಯ ನಾಟಕ ಪ್ರದರ್ಶನವನ್ನು ಮೇ 24ರಂದು ಸಂಜೆ 6 ಗಂಟೆಗೆ ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಬಳಗದ ಅಧ್ಯಕ್ಷ ಎಂ.ಸಿ.ಲಂಕೇಶ್ ತಿಳಿಸಿದರು.
ವೇದಿಕೆ ಕಾರ್ಯಕ್ರಮದ ಸಾನಿಧ್ಯವನ್ನು ವಿಶ್ವ ಒಕ್ಕಲಿಗ ಮಠದ ಉತ್ತರಾಧಿಕಾರಿ ಡಾ.ನಿಶ್ಚಲಾನಂದನಾಥ ಸ್ವಾಮೀಜಿ ವಹಿಸಲಿದ್ದು, ನೆಲದನಿ ಬಳಗದ ಪೋಷಕಿ ರುಕ್ಮಿಣಿ ಎಸ್.ಸಿ.ಶಂಕರೇಗೌಡ ಅಧ್ಯಕ್ಷತೆ ವಹಿಸುವರು. ರೈತ ಹೋರಾಟಗಾರ್ತಿ ಸುನಂದ ಜಯರಾಂ ಉದ್ಘಾಟನೆ ನೆರವೇರಿಸುವರು ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಡಾ.ಆರ್.ಮನೋಹರ್, ಡಾ.ರವಿಕುಮಾರ್, ಎಚ್.ಆರ್.ಕನ್ನಿಕಾ ಅವರನ್ನು ಅಭಿನಂದಿಸಲಾಗುವುದು. ವೇದಿಕೆ ಕಾರ್ಯಕ್ರಮದ ನಂತರ 1 ಗಂಟೆ 50 ನಿಮಿಷದ ನಾಟಕ ಪ್ರದರ್ಶನವಾಗಲಿದೆ ಎಂದರು.
ಬಳಗದ ನವೀನ್‌ಕುಮಾರಿ, ಕುಮಾರ್‌ಗೌಡ, ಶಿವಮಲ್ಲು, ನಾಗೇಶ್, ಮಹದೇವಸ್ವಾಮಿ ಇದ್ದರು.