

ಚಿತ್ರದುರ್ಗ: ಜಿಲ್ಲಾಡಳಿತ, ಶಿಕ್ಷಣ ಇಲಾಖೆ, ರಾಜ್ಯಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿ ಹಾಗೂ ಕಲಾ ಚೈತನ್ಯ ಸೇವಾ ಸಂಸ್ಥೆ ಸಂಯುಕ್ತಾಶ್ರ ಯದಲ್ಲಿ ವಿಶ್ವ ಪರಿಸರ ದಿನಾಚರಣೆ-2025ರ ಅಂಗವಾಗಿ ನಗರದ ಕ್ರೀಡಾಭವನದಲ್ಲಿ ಜೂ.26ರಂದು ಬೆಳಗ್ಗೆ 11ಕ್ಕೆ ‘ಜಾಗತಿಕವಾಗಿ ಪ್ಲಾಸ್ಟಿಕ್ ಮಾಲಿನ್ಯ ಕೊನೆಗೊಳಿಸುವುದು’ ವಿಷಯದ ಕುರಿತು ನಗರ ವ್ಯಾಪ್ತಿಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸ್ಥಳದಲ್ಲೇ ಚಿತ್ರ ಬಿಡಿಸುವ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ. ಅಂದು ಮಧ್ಯಾಹ್ನ 2ಕ್ಕೆ ಅದೇ ಸ್ಥಳದಲ್ಲಿ ವಿಜೇತರಿಗೆ ಬಹುಮಾನ ವಿತರಣೆ ಸಮಾರಂಭವನ್ನು ಡಿಸಿ ಟಿ. ವೆಂಕಟೇಶ್ ಉದ್ಘಾಟಿಸುವರು. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ದಾವಣಗೆರೆ ವಲಯ ಕಚೇರಿ ಹಿರಿಯ ಪರಿಸರ ಅಧಿಕಾರಿ ರಮೇಶ್ ಡಿ. ನಾಯಕ್ ಮತ್ತಿತರ ಗಣ್ಯರು ಭಾಗವಹಿಸುವರು ಎಂದು ಮಂಡಳಿ ಚಿತ್ರದುರ್ಗ ಪ್ರಾದೇಶಿಕ ಕಚೇರಿ ಪರಿಸರ ಅಧಿಕಾರಿ ಅಸಿಫ್‌ಖಾನ್ ತಿಳಿಸಿದ್ದಾರೆ.
-------------------