

ಬೆಂಗಳೂರು ಗ್ರಾಮಾಂತರ: ರಾಜ್ಯದ ಗಡಿ ಪ್ರದೇಶಗಳಲ್ಲಿ ಭಾಷೆ, ಸಂಸತಿ, ಜಲ, ಪ್ರದೇಶಗಳ ಸಂರ್ಷವಿರುವುದು ಸಹಜ, ಈ ಸಮಸ್ಯೆಗಳ ನಿವಾರಣೆಗಾಗಿ, ಕನ್ನಡದ ಅಸ್ಮಿತೆ ಉಳಿಸಲು, ಗಡಿ ಪ್ರದೇಶದ ಹಳ್ಳಿಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸುವ ಮೂಲಕ ಅಭಿವೃದ್ಧಿಗೆ ಒತ್ತು ನೀಡಬೇಕು ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ್ ತಿಳಿಸಿದರು.
ದೇವನಹಳ್ಳಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಯೋಜನೆಗಳು, ಕಾಮಗಾರಿಗಳು ಮತ್ತು ಗಡಿ ಭಾಗದಲ್ಲಿನ ವಿವಿಧ ಯೋಜನೆಗಳ ಅನುಷ್ಠಾನ ಕುರಿತ ಸಭೆಯಲ್ಲಿ ಮಾತನಾಡಿದರು. ರಾಜ್ಯದ 19 ಜಿಲ್ಲೆಗಳ 63 ತಾಲೂಕುಗಳಲ್ಲಿನ 998 ಹಳ್ಳಿಗಳು ಪ್ರಾಧಿಕಾರದ ವ್ಯಾಪ್ತಿಗೆ ಒಳಪಟ್ಟಿದೆ. ಅದರಂತೆ ಜಿಲ್ಲೆಯ ಹೊಸಕೋಟೆ ತಾಲೂಕಿನಲ್ಲಿ 299 ಹಳ್ಳಿಗಳಿದ್ದು, 9 ಗಡಿ ಹಳ್ಳಿಗಳು ಪ್ರಾಧಿಕಾರದ ವ್ಯಾಪ್ತಿಗೆ ಬರಲಿದೆ. ಹೊಸಕೋಟೆ ತಾಲೂಕು ಅಭಿವೃದ್ಧಿಗಾಗಿ 2012-13 ರಿಂದ 2021-22 ರವರೆಗೆ ಪ್ರಾಧಿಕಾರದಿಂದ 33 ಲಕ್ಷ ರೂ.ಅನುದಾನ ಬಿಡುಗಡೆ ಮಾಡಲಾಗಿದೆ. 24 ಲಕ್ಷ ರೂ.ಅನುದಾನ ಬಳಕೆಯಾಗಿದೆ ಎಂದು ಮಾಹಿತಿ ನೀಡಿದರು. ಹೊಸಕೋಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಗ್ರಂಥಾಲಯ ಕಟ್ಟಡ ನಿರ್ಮಾಣಕ್ಕಾಗಿ 5 ಲಕ್ಷ ರೂ. ಅನುದಾನ ಬಿಡುಗಡೆಯಾಗಿದ್ದು, ಶ್ರೀ ಅಂದಾಜು ವೆಚ್ಚ ಸಲ್ಲಿಸಿ ಕಾಮಗಾರಿ ಕೈಗೊಳ್ಳಬೇಕೆಂದು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಸಾಂಸತಿಕ ಕಾರ್ಯಕ್ರಮ ರೂಪಿಸಲು ಸೂಚನೆ: ಸಂಸತಿ ಮತ್ತು ಪ್ರಗತಿ ಒಂದೇ ನಾಣ್ಯದ ಎರಡು ಮುಖಗಳಾಗಿದ್ದು, ಕನ್ನಡ ಸಂಸತಿಯನ್ನು ಉಳಿಸಿ, ಬೆಳೆಸಲು ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮಗಳನ್ನು ಆಯೋಜಿಸಲು ಹೊಸಕೋಟೆಯ 4 ಸಂಸ್ಥೆಗಳಿಗೆ ತಲಾ 1 ಲಕ್ಷ ರೂ.ನಂತೆ 4 ಲಕ್ಷ ರೂ. ಬಿಡುಗಡೆ ಮಾಡಲಾಗಿದ್ದು, ಶ್ರೀ ಸಾಂಸತಿಕ ಕಾರ್ಯಕ್ರಮ ಏರ್ಪಡಿಸುವಂತೆ ತಿಳಿಸಿದರು.
ಗಡಿಜಿಲ್ಲೆಗಳಲ್ಲಿ ವಾಸ್ತವ್ಯ ಮಾಡಿ: ಹೊಸಕೋಟೆ ತಾಲೂಕಿನ ಗಡಿ ಭಾಗದ ಕನ್ನಡ ಶಾಲೆಗಳಿಗೆ ಭೇಟಿ ನೀಡಿ, ಕನ್ನಡ ಶಿಕ್ಷಕರ ಕೊರತೆ, ನೀರು, ಶೌಚಗೃಹ, ಗ್ರಂಥಾಲಯ, ಸ್ಮಾರ್ಟ್ ಕ್ಲಾಸ್ ಇನ್ನಿತರ ಸ್ಥಿತಿಗತಿಗಳನ್ನು ಪರಿಶೀಲಿಸಿ, ವರದಿ ನೀಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಸೂಚಿಸಿದರು. ತಿಂಗಳಿಗೊಮ್ಮೆ ಜಿಲ್ಲೆಯ ಗಡಿ ಗ್ರಾಮಗಳಿಗೆ ಜಿಲ್ಲಾಧಿಕಾರಿ ಹಾಗೂ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಮೂಲಸೌಕರ್ಯಗಳ ಪರಿಶೀಲನೆ ನಡೆಸಿ, ಗ್ರಾಮ ವಾಸ್ತವ್ಯ ಮಾಡಬೇಕು ಎಂದು ಸೋಮಶೇಖರ್ ತಿಳಿಸಿದರು.
ವರದಿ ನೀಡಲು ತಾಕೀತು: ಗಡಿ ಭಾಗದ ಸಾಮಾಜಿಕಆರ್ಥಿಕ ಸಮೀಕ್ಷೆ ನಡೆಸಿ ವರದಿ ನೀಡುವಂತೆ ಜಿಲ್ಲಾ ಸಾಂಖ್ಯಿಕ ಅಧಿಕಾರಿಗೆ ಸೂಚಿಸಿದರು.ಯುವ ಸಮುದಾಯಕ್ಕೆ ಕೌಶಲಾಭಿವೃದ್ದಿ ತರಬೇತಿ ನೀಡಿ, ಉದ್ಯೋಗ ಮೇಳ ಆಯೋಜಿಸಬೇಕೆಂದು ನಿರ್ದೇಶಿಸಿದರು. ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರರು, ಕನ್ನಡಪರ ಹೋರಾಟಗಾರರು, ದಾರ್ಶನಿಕರು, ಸಾಹಿತಿಗಳ ಸ್ಮಾರಕಗಳನ್ನು ರಸಿ, ಅಭಿವೃದ್ಧಿ ಪಡಿಸುವಂತೆ ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಅನ್ಯ ಜಿಲ್ಲೆಗಳಿಗೆ ಹೋಲಿಸಿದರೆ ಗ್ರಾಮಾಂತರ ಜಿಲ್ಲೆಯಲ್ಲಿ ಗಡಿ ಪ್ರದೇಶ ಸಂರ್ಷ, ಭಾಷೆ ಸಂರ್ಷ ಕಂಡುಬಂದಿಲ್ಲ. ಆದರೂ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ, ಸಾಂಸತಿಕ ಚಟುವಟಿಕೆಗಳನ್ನು ಹೆಚಿಸುವುದರ ಜತೆಗೆ ಕಾಮಗಾರಿಗಳಿಗೆ ಸಾಂಸ್ಕೃತಿಕ ಸ್ಪರ್ಶ ನೀಡಬೇಕು ಎಂದರು.