ಈ ರಸ್ತೆಯಲ್ಲಿ ಮೂಗುಮುಚ್ಚಿಕೊಂಡೇ ಹೋಗಬೇಕು!

road problem
Published on

ಮುಂಡರಗಿ: ತಾಲೂಕಿನ ಹೆಸರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗರಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಸಮೀಪದಲ್ಲಿರುವ ಹಾಗೂ ಕೆರೆ ದಾರಿ, ಬೇರೆ ಊರುಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಸುಮಾರು 100 ಮೀಟರ್‌ನಷ್ಟು ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರು ಕಿರಿಕಿರಿ ಅನುಭವಿಸುವಂತಾಗಿದೆ.

ಏಳೆಂಟು ವರ್ಷಗಳಿಂದ ರಸ್ತೆ ಹದಗಟ್ಟಿದ್ದು, ತಗ್ಗುಗಳಿಂದ ಕೂಡಿದೆ. ಮಳೆಗಾಲದಲ್ಲಿ ರಸ್ತೆಯಲ್ಲಿ ನೀರು ನಿಲ್ಲುತ್ತದೆ. ರಸ್ತೆ ಬದಿ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಗಲೀಜು ನೀರು ರಸ್ತೆಯಲ್ಲೇ ನಿಲ್ಲುತ್ತಿದೆ.

ಹೀಗಾಗಿ, ದುರ್ವಾಸನೆ ಹರಡಿದ್ದು, ಸಾರ್ವಜನಿಕರು ಮೂಗು ಮುಚ್ಚಿಕೊಂಡು ಓಡಾಡುವಂತಾಗಿದೆ.
ಇಂತಹ ಅವ್ಯವಸ್ಥೆಯಿಂದ ಕೂಡಿರುವ ರಸ್ತೆಯ ಪಕ್ಕದಲ್ಲೇ ಅಂಗನವಾಡಿ ಕೇಂದ್ರವಿದೆ. ಈ ಬಗ್ಗೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ತಕ್ಷಣ ಸಂಬಂಧಪಟ್ಟವರು ಗಮನ ಹರಿಸಿ ರಸ್ತೆ ಹಾಗೂ ಚರಂಡಿ ನಿರ್ಮಿಸಬೇಕು ಎಂದು ಗ್ರಾಮದ ನಿವಾಸಿ ದೇವರಾಜ ಬೆಟಗೇರಿ ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net