

ಅರಸೀಕೆರೆ ಗ್ರಾಮಾಂತರ : ತಾಲೂಕಿನ ಜಾವಗಲ್ ಹೋಬಳಿ ಕರಗುಂದ ಗ್ರಾಮದ ಪರಿಶಿಷ್ಟರ ಕಾಲನಿಯಲ್ಲಿ ರಸ್ತೆ ಹಾಗೂ ಚರಂಡಿಗೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆಯನ್ನು ಶಾಸಕ ಹುಲ್ಲಳ್ಳಿ ಸುರೇಶ್ ಭಾನುವಾರ ನೇರವೇರಿಸಿದರು ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಸುರೇಶ್,
ತಾಲೂಕಿನ ಎಲ್ಲಾ ಪರಿಶಿಷ್ಟ ಜಾತಿ ಮತ್ತು ಪಂಗಡದವರು ವಾಸಿಸುವ ಗ್ರಾಮ ಹಾಗೂ ವಸತಿ ಸಮುಚ್ಚಯಗಳಲ್ಲಿ ರಸ್ತೆ, ಚರಂಡಿ ನಿರ್ಮಾಣ ಮಾಡುವುದು ಎಂದು ಭರವಸೆ ನೀಡಿದರು. ಮುಖಂಡರಾದ ಪ್ರತಾಪ್, ಮಹೇಶ್, ಶಿವರಾಜ್ ಇತರರು ಹಾಜರಿದ್ದರು.