ನೀರನ್ನು ಕುದಿಸಿ ಆರಿಸಿ ಕುಡಿಯಲು ಡಿಸಿ ಸಲಹೆ

¨DC_Web
Published on

ತುಮಕೂರು: ಜಿಲ್ಲೆಯ ಮಧುಗಿರಿ ತಾಲೂಕು ಚಿನ್ನೇನಹಳ್ಳಿ ಗ್ರಾಮದಲ್ಲಿ ವಾಂತಿ-ಬೇಧಿ ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಜನರು ಕುಡಿಯುವ ನೀರನ್ನು ಕಾಯಿಸಿ ಆರಿಸಿ ಕುಡಿಯುವಂತೆ ಜಿಲ್ಲಾಧಿಕಾರಿ ಶುಭಕಲ್ಯಾಣ್​ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಕುಡಿಯುವ ನೀರಿನಿಂದ ಕಾಲರಾ, ವಾಂತಿ-ಬೇಧಿ, ಕರುಳು ಬೇನೆ ಸೇರಿದಂತೆ ಮತ್ತಿತರ ಖಾಯಿಲೆಗಳು ಹರುಡುವ ಸಾಧ್ಯತೆ ಇರುವುದರಿಂದ ಜಿಲ್ಲೆಯ ಜನರು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕುಡಿಯುವ ನೀರನ್ನು ಕುದಿಸಿ ಆರಿಸಿ ಕುಡಿಯಬೇಕೆಂದು ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net